కీర్తనల గ్రంథము 4 : 1 (ERVTE)
*ರಚನೆಗಾರ: ದಾವೀದ. *ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.
కీర్తనల గ్రంథము 4 : 2 (ERVTE)
ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳುಅಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?
కీర్తనల గ్రంథము 4 : 3 (ERVTE)
ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.
కీర్తనల గ్రంథము 4 : 4 (ERVTE)
ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ.
కీర్తనల గ్రంథము 4 : 5 (ERVTE)
ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ!
కీర్తనల గ్రంథము 4 : 6 (ERVTE)
“ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.
కీర్తనల గ్రంథము 4 : 7 (ERVTE)
ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.
కీర్తనల గ్రంథము 4 : 8 (ERVTE)
ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.
❮
❯