కీర్తనల గ్రంథము 40 : 1 (ERVTE)
*ರಚನೆಗಾರ: ದಾವೀದ. *ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು.
కీర్తనల గ్రంథము 40 : 2 (ERVTE)
ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ[* ನಾಶನದ ಗುಂಡಿಯೊಳಗಿಂದ “ಶಿಯೊಲ್”ಗೆ ಮತ್ತೊಂದು ಹೆಸರು “ಮರಣದ ಸ್ಥಳ.” ] ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ [† ಕೆಸರಿನ ಸ್ಥಳದಿಂದ ಅನೇಕ ಪುರಾತನ ಕಥೆಗಳಲ್ಲಿ ಮರಣದ ಸ್ಥಳವಾದ ಶಿಯೊಲ್ ಸುತ್ತಲೆಲ್ಲಾ ಕೆಸರಿನಿಂದ ಕೂಡಿರುವ ಕತ್ತಲಾದ ಸ್ಥಳವೆಂದು ಹೇಳಲಾಗಿದೆ. ಸಾಮಾನ್ಯವಾಗಿ ಸತ್ತಜನರನ್ನು ನೆಲದೊಳಗೆ ಹೂಳುವುದೇ ಇದಕ್ಕೆ ಕಾರಣ. ] ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
కీర్తనల గ్రంథము 40 : 3 (ERVTE)
ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು.
కీర్తనల గ్రంథము 40 : 4 (ERVTE)
ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.
కీర్తనల గ్రంథము 40 : 5 (ERVTE)
ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.
కీర్తనల గ్రంథము 40 : 6 (ERVTE)
ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.
కీర్తనల గ్రంథము 40 : 7 (ERVTE)
ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ. ನನ್ನ ವಿಷಯವಾಗಿ ಗ್ರಂಥದಲ್ಲಿ ಇದನ್ನು ಬರೆಯಲಾಗಿದೆ.
కీర్తనల గ్రంథము 40 : 8 (ERVTE)
ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.
కీర్తనల గ్రంథము 40 : 9 (ERVTE)
ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.
కీర్తనల గ్రంథము 40 : 10 (ERVTE)
ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು.
కీర్తనల గ్రంథము 40 : 11 (ERVTE)
ಯೆಹೋವನೇ, ನಿನ್ನ ಕರುಣೆಯನ್ನು ನನ್ನಿಂದ ದೂರ ಮಾಡಬೇಡ. ನಿನ್ನ ದಯೆಯೂ ನಂಬಿಗಸ್ತಿಕೆಯೂ ನನ್ನನ್ನು ಸಂರಕ್ಷಿಸಲಿ.
కీర్తనల గ్రంథము 40 : 12 (ERVTE)
ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.
కీర్తనల గ్రంథము 40 : 13 (ERVTE)
ಯೆಹೋವನೇ, ನನ್ನನ್ನೇ ರಕ್ಷಿಸು! ಬೇಗನೆ ಬಂದು ನನ್ನನ್ನು ಕಾಪಾಡು!
కీర్తనల గ్రంథము 40 : 14 (ERVTE)
ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ!
కీర్తనల గ్రంథము 40 : 15 (ERVTE)
ನನ್ನನ್ನು ಗೇಲಿಮಾಡುವ ಆ ದುಷ್ಟರು ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ!
కీర్తనల గ్రంథము 40 : 16 (ERVTE)
ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಪಡಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ.
కీర్తనల గ్రంథము 40 : 17 (ERVTE)
ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು. ನನ್ನ ದೇವರೇ, ತಡಮಾಡಬೇಡ.
❮
❯
1
2
3
4
5
6
7
8
9
10
11
12
13
14
15
16
17