కీర్తనల గ్రంథము 46 : 1 (ERVTE)
*ರಚನೆಗಾರರು: ಕೋರಹೀಯರು. *ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.
కీర్తనల గ్రంథము 46 : 2 (ERVTE)
ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.
కీర్తనల గ్రంథము 46 : 3 (ERVTE)
ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.
కీర్తనల గ్రంథము 46 : 4 (ERVTE)
ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.
కీర్తనల గ్రంథము 46 : 5 (ERVTE)
ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.
కీర్తనల గ్రంథము 46 : 6 (ERVTE)
ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.
కీర్తనల గ్రంథము 46 : 7 (ERVTE)
ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.
కీర్తనల గ్రంథము 46 : 8 (ERVTE)
ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.
కీర్తనల గ్రంథము 46 : 9 (ERVTE)
ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ[* ಗುರಾಣಿಗಳನ್ನು ಅಥವಾ ರಥಗಳನ್ನು. ] ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.
కీర్తనల గ్రంథము 46 : 10 (ERVTE)
ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”
కీర్తనల గ్రంథము 46 : 11 (ERVTE)
ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.
❮
❯