కీర్తనల గ్రంథము 51 : 1 (ERVTE)
*ದಾವೀದನು ಬತ್ಷೆಬಳೊಂದಿಗೆ ವ್ಯಭಿಚಾರ ಮಾಡಿದಾಗ ಪ್ರವಾದಿಯಾದ ನಾತಾನನು ದಾವೀದನ ಬಳಿಗೆ ಹೋಗಿ ದೇವರ ನ್ಯಾಯತೀರ್ಪನ್ನು ಹೇಳುತ್ತಾನೆ. ಆಗ ಈ ಕೀರ್ತನೆ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. *ಪ್ರೀತಿಸ್ವರೂಪನಾದ ದೇವರೇ, ನನಗೆ ಕರುಣೆತೋರು; ಕರುಣಾನಿಧಿಯೇ, ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
కీర్తనల గ్రంథము 51 : 2 (ERVTE)
ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!
కీర్తనల గ్రంథము 51 : 3 (ERVTE)
ನಾನು ಪಾಪಮಾಡಿದ್ದೇನೆಂದು ನನಗೆ ಗೊತ್ತಿದೆ. ಆ ಪಾಪಗಳು ನನ್ನ ಮುಂದೆಯೇ ಇವೆ.
కీర్తనల గ్రంథము 51 : 4 (ERVTE)
ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.
కీర్తనల గ్రంథము 51 : 5 (ERVTE)
ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.
కీర్తనల గ్రంథము 51 : 6 (ERVTE)
ದೇವರೇ, ನಾನು ನಿನಗೆ ನಂಬಿಗಸ್ತನಾಗಿರಬೇಕೆಂಬುದೇ ನಿನ್ನ ಅಪೇಕ್ಷೆ. ಆದ್ದರಿಂದ ಸುಜ್ಞಾನದ ರಹಸ್ಯಗಳನ್ನು ನನಗೆ ಉಪದೇಶಿಸು.
కీర్తనల గ్రంథము 51 : 7 (ERVTE)
ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!
కీర్తనల గ్రంథము 51 : 8 (ERVTE)
ನನ್ನಲ್ಲಿ ಆನಂದವನ್ನೂ ಉಲ್ಲಾಸವನ್ನೂ ಬರಮಾಡು. ನೀನು ಜಜ್ಜಿಹಾಕಿದ ಮೂಳೆಗಳು ಮತ್ತೆ ಉಲ್ಲಾಸಿಸಲಿ!
కీర్తనల గ్రంథము 51 : 9 (ERVTE)
ನನ್ನ ಪಾಪಗಳನ್ನು ನೋಡಬೇಡ! ಅವುಗಳನ್ನೆಲ್ಲ ಅಳಿಸಿಬಿಡು!
కీర్తనల గ్రంథము 51 : 10 (ERVTE)
ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು.
కీర్తనల గ్రంథము 51 : 11 (ERVTE)
ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!
కీర్తనల గ్రంథము 51 : 12 (ERVTE)
ನಿನ್ನ ರಕ್ಷಣೆಯಿಂದುಂಟಾಗುವ ಆನಂದವನ್ನು ನನಗೆ ಮತ್ತೆ ದಯಪಾಲಿಸು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು.
కీర్తనల గ్రంథము 51 : 13 (ERVTE)
ನಿನ್ನ ಜೀವಮಾರ್ಗವನ್ನು ನಾನು ಪಾಪಿಗಳಿಗೆ ಉಪದೇಶಿಸುವೆನು; ಆಗ ಅವರು ನಿನ್ನ ಬಳಿಗೆ ಹಿಂತಿರುಗಿ ಬರುವರು.
కీర్తనల గ్రంథము 51 : 14 (ERVTE)
ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!
కీర్తనల గ్రంథము 51 : 15 (ERVTE)
ನನ್ನ ಯೆಹೋವನೇ, ನನ್ನ ಬಾಯಿ ತೆರೆದು ನಿನ್ನನ್ನು ಕೊಂಡಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.
కీర్తనల గ్రంథము 51 : 16 (ERVTE)
ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!
కీర్తనల గ్రంథము 51 : 17 (ERVTE)
ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆ ಮತ್ತು ವಿಧೇಯತೆಯುಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.
కీర్తనల గ్రంథము 51 : 18 (ERVTE)
ಚೀಯೋನಿಗೆ ಕರುಣೆತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು.
కీర్తనల గ్రంథము 51 : 19 (ERVTE)
ಆಗ ಜನರು ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.
❮
❯
1
2
3
4
5
6
7
8
9
10
11
12
13
14
15
16
17
18
19