కీర్తనల గ్రంథము 52 : 1 (ERVTE)
*ಎದೋಮ್ಯನಾದ ದೋಯೇಗನು ಸೌಲನ ಬಳಿಗೆ ಹೋಗಿ, “ದಾವೀದನು ಅಹೀಮೆಲೆಕನ ಮನೆಯಲ್ಲಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ. *ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.
కీర్తనల గ్రంథము 52 : 2 (ERVTE)
ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು.
కీర్తనల గ్రంథము 52 : 3 (ERVTE)
ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.
కీర్తనల గ్రంథము 52 : 4 (ERVTE)
ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
కీర్తనల గ్రంథము 52 : 5 (ERVTE)
ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ[* ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು. ] ಕಿತ್ತು ಬೀಸಾಡುವನು.
కీర్తనల గ్రంథము 52 : 6 (ERVTE)
ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು:
కీర్తనల గ్రంథము 52 : 7 (ERVTE)
“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”
కీర్తనల గ్రంథము 52 : 8 (ERVTE)
ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ.
కీర్తనల గ్రంథము 52 : 9 (ERVTE)
ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.
❮
❯