కీర్తనల గ్రంథము 54 : 1 (ERVTE)
*ಜಿಫೆಂಬ ಸ್ಥಳದವರು ಸೌಲನ ಬಳಿಗೆ ಹೋಗಿ, “ದಾವೀದನು ನಮ್ಮಲ್ಲಿ ಅಡಗಿಕೊಂಡಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ. *ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.
కీర్తనల గ్రంథము 54 : 2 (ERVTE)
ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮಾತುಗಳನ್ನು ಕೇಳು.
కీర్తనల గ్రంథము 54 : 3 (ERVTE)
ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.
కీర్తనల గ్రంథము 54 : 4 (ERVTE)
ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು. ನನ್ನ ಒಡಯನೇ ನನಗೆ ಆಧಾರ ನೀಡುವನು.
కీర్తనల గ్రంథము 54 : 5 (ERVTE)
ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು. ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು.
కీర్తనల గ్రంథము 54 : 6 (ERVTE)
ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.
కీర్తనల గ్రంథము 54 : 7 (ERVTE)
ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು.
❮
❯