కీర్తనల గ్రంథము 56 : 1 (ERVTE)
*ಗತ್ ಎಂಬ ಊರಲ್ಲಿ ಫಿಲಿಷ್ಟಿಯರು ಸೆರೆಹಿಡಿದಾಗ ರಚಿಸಿಲ್ಪಟ್ಟಿತು. ರಚನೆಗಾರ: ದಾವೀದ. *ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ.
కీర్తనల గ్రంథము 56 : 2 (ERVTE)
ನನ್ನ ವೈರಿಗಳು ಸತತವಾಗಿ ನನ್ನ ಮೇಲೆ ಆಕ್ರಮಣ ಮಾಡುವರು. ಅವರಲ್ಲಿರುವ ಹೋರಾಟಗಾರರು ಅಸಂಖ್ಯಾತ.
కీర్తనల గ్రంథము 56 : 3 (ERVTE)
ನಾನು ಭಯಗೊಂಡಾಗ, ನಿನ್ನಲ್ಲೇ ಭರವಸೆ ಇಡುವೆ.
కీర్తనల గ్రంథము 56 : 4 (ERVTE)
ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು.
కీర్తనల గ్రంథము 56 : 5 (ERVTE)
ನನ್ನ ವೈರಿಗಳು ನನ್ನ ಮಾತುಗಳಿಗೆ ಅಪಾರ್ಥ ಮಾಡುವರು. ನನಗೆ ಕೇಡುಮಾಡಬೇಕೆಂದೇ ಅವರು ಯಾವಾಗಲೂ ಯೋಚಿಸುವರು.
కీర్తనల గ్రంథము 56 : 6 (ERVTE)
ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.
కీర్తనల గ్రంథము 56 : 7 (ERVTE)
ದೇವರೇ, ಅವರ ದುಷ್ಟತನದ ನಿಮಿತ್ತ ಅವರನ್ನು ಸೆರೆಯಾಳುಗಳಾಗಿ ಕಳುಹಿಸು. ಅವರು ಅನ್ಯ ಜನಾಂಗಗಳ ಕೋಪವನ್ನು ಅನುಭವಿಸುವಂತೆ ಹೊರಗಟ್ಟು.
కీర్తనల గ్రంథము 56 : 8 (ERVTE)
ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.
కీర్తనల గ్రంథము 56 : 9 (ERVTE)
ಆದ್ದರಿಂದ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುವಾಗ ನನ್ನ ಶತ್ರುಗಳನ್ನು ಸೋಲಿಸು. ನೀನು ಮಾಡಬಲ್ಲೆ ಎಂದು ನನಗೆ ಗೊತ್ತಿದೆ; ನೀನೇ ದೇವರು!
కీర్తనల గ్రంథము 56 : 10 (ERVTE)
ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.
కీర్తనల గ్రంథము 56 : 11 (ERVTE)
ನಾನು ದೇವರಲ್ಲಿ ಭರವಸವಿಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು?
కీర్తనల గ్రంథము 56 : 12 (ERVTE)
ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.
కీర్తనల గ్రంథము 56 : 13 (ERVTE)
ಯಾಕೆಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.

1 2 3 4 5 6 7 8 9 10 11 12 13