కీర్తనల గ్రంథము 57 : 1 (ERVTE)
*ಗುಹೆಯಲ್ಲಿ ಸೌಲನಿಂದ ಪಾರಾದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ *ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
కీర్తనల గ్రంథము 57 : 2 (ERVTE)
ಸಹಾಯಕ್ಕಾಗಿ ಮಹೋನ್ನತನಾದ ದೇವರಿಗೆ ಮೊರೆಯಿಡುವೆನು. ಆತನು ಕೊರತೆಗಳನ್ನೆಲ್ಲಾ ನೀಗಿಸುವನು.
కీర్తనల గ్రంథము 57 : 3 (ERVTE)
ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.
కీర్తనల గ్రంథము 57 : 4 (ERVTE)
ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.
కీర్తనల గ్రంథము 57 : 5 (ERVTE)
ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.
కీర్తనల గ్రంథము 57 : 6 (ERVTE)
ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.
కీర్తనల గ్రంథము 57 : 7 (ERVTE)
ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನನ್ನ ಹೃದಯವು ದೃಢವಾಗಿದೆ. ನಾನು ವಾದ್ಯ ಬಾರಿಸುತ್ತಾ ಹಾಡುವೆನು.
కీర్తనల గ్రంథము 57 : 8 (ERVTE)
ನನ್ನ ಮನವೇ, ಎಚ್ಚರಗೊಳ್ಳು! ಹಾರ್ಪ್ ಮತ್ತು ಲೈರ್ ವಾದ್ಯಗಳೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಸೂರ್ಯೋದಯವನ್ನು ಎದುರುಗೊಳ್ಳೋಣ.
కీర్తనల గ్రంథము 57 : 9 (ERVTE)
ನನ್ನ ಒಡೆಯನೇ, ಜನಾಂಗಗಳ ನಡುವೆ ನಿನ್ನನ್ನು ಕೊಂಡಾಡುವೆನು. ಎಲ್ಲಾ ದೇಶಗಳಲ್ಲಿ ನಿನಗೆ ಸ್ತುತಿಗೀತೆಗಳನ್ನು ಹಾಡುವೆನು.
కీర్తనల గ్రంథము 57 : 10 (ERVTE)
ಯಾಕೆಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ.
కీర్తనల గ్రంథము 57 : 11 (ERVTE)
ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.

1 2 3 4 5 6 7 8 9 10 11