కీర్తనల గ్రంథము 58 : 1 (ERVTE)
*ರಚನೆಗಾರ: ದಾವೀದ. *ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ?
కీర్తనల గ్రంథము 58 : 2 (ERVTE)
ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ.
కీర్తనల గ్రంథము 58 : 3 (ERVTE)
ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ.
కీర్తనల గ్రంథము 58 : 4 (ERVTE)
ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯಕರ.[* ವಿಷದಷ್ಟೇ ಅಪಾಯಕರ ಇದು ಶಬ್ದ ಚಮತ್ಕಾರ. ಹೀಬ್ರೂ ಪದ “ಬಿಸಿಕೋಪವು,” “ಸುಡುವ ವಿಷವು” ಎಂಬಂತೆ ಉಚ್ಚರಿಸಲ್ಪಡುತ್ತದೆ. ] ಕಿವುಡು ನಾಗರಹಾವಿನಂತೆ ಅವರು ಸತ್ಯಕ್ಕೆ ಕಿವಿಗೊಡುವುದಿಲ್ಲ.
కీర్తనల గ్రంథము 58 : 5 (ERVTE)
ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು.
కీర్తనల గ్రంథము 58 : 6 (ERVTE)
ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು.
కీర్తనల గ్రంథము 58 : 7 (ERVTE)
ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ.
కీర్తనల గ్రంథము 58 : 8 (ERVTE)
ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ.
కీర్తనల గ్రంథము 58 : 9 (ERVTE)
ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.
కీర్తనల గ్రంథము 58 : 10 (ERVTE)
ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.
కీర్తనల గ్రంథము 58 : 11 (ERVTE)
ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.
❮
❯