కీర్తనల గ్రంథము 64 : 1 (ERVTE)
*ರಚನೆಗಾರ: ದಾವೀದ. *ದೇವರೇ, ನನಗೆ ಕಿವಿಗೊಡು. ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ. ನನ್ನ ಪ್ರಾಣವನ್ನು ರಕ್ಷಿಸು.
కీర్తనల గ్రంథము 64 : 2 (ERVTE)
ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.
కీర్తనల గ్రంథము 64 : 3 (ERVTE)
ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.
కీర్తనల గ్రంథము 64 : 4 (ERVTE)
ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ[* ನಿರ್ಭಯದಿಂದ ಅಥವಾ ಅಗೌರವದಿಂದ. ] ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.
కీర్తనల గ్రంథము 64 : 5 (ERVTE)
ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.
కీర్తనల గ్రంథము 64 : 6 (ERVTE)
ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.[† ಅವರು … ಬಹು ಕಷ್ಟ ಅಥವಾ, “ಅವರು ದುಷ್ಟ ಯೋಜನೆಗಳಿಗಾಗಿ ಎದುರುನೋಡುತ್ತಾ, ನಮ್ಮಲ್ಲಿ ಸಂಪೂರ್ಣವಾದ ಯೋಜನೆಯಿದೆ” ಎನ್ನುತ್ತಾರೆ. ]
కీర్తనల గ్రంథము 64 : 7 (ERVTE)
ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು. ಆಗ ಆ ದುಷ್ಟರು ಗಾಯಗೊಳ್ಳುವರು.
కీర్తనల గ్రంథము 64 : 8 (ERVTE)
ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.
కీర్తనల గ్రంథము 64 : 9 (ERVTE)
ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.
కీర్తనల గ్రంథము 64 : 10 (ERVTE)
ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ ಆತನನ್ನೇ ಆಶ್ರಯಿಸಿಕೊಳ್ಳುವರು. ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.
❮
❯