కీర్తనల గ్రంథము 67 : 1 (ERVTE)
*ಸ್ತುತಿಗೀತೆ. *ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನಮುಖದಿಂದ ನಮ್ಮನ್ನು ನೋಡು.
కీర్తనల గ్రంథము 67 : 2 (ERVTE)
ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ.
కీర్తనల గ్రంథము 67 : 3 (ERVTE)
ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
కీర్తనల గ్రంథము 67 : 4 (ERVTE)
ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.
కీర్తనల గ్రంథము 67 : 5 (ERVTE)
ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
కీర్తనల గ్రంథము 67 : 6 (ERVTE)
ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.
కీర్తనల గ్రంథము 67 : 7 (ERVTE)
ಆತನು ನಮ್ಮನ್ನು ಆಶೀರ್ವದಿಸಲಿ. ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.

1 2 3 4 5 6 7