కీర్తనల గ్రంథము 7 : 1 (ERVTE)
*ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ರಚಿಸಲ್ಪಟ್ಟಿದೆ. * *ರಚನೆಗಾರ: ದಾವೀದ. *ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು!
కీర్తనల గ్రంథము 7 : 2 (ERVTE)
ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು.
కీర్తనల గ్రంథము 7 : 3 (ERVTE)
ನನ್ನ ದೇವರಾದ ಯೆಹೋವನೇ, ನಾನು ಯಾವುದೇ ಅಪರಾಧವನ್ನು ಮಾಡಿದ್ದರೆ,
కీర్తనల గ్రంథము 7 : 4 (ERVTE)
ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,
కీర్తనల గ్రంథము 7 : 5 (ERVTE)
ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ.
కీర్తనల గ్రంథము 7 : 6 (ERVTE)
ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!
కీర్తనల గ్రంథము 7 : 7 (ERVTE)
ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತಸ್ಥಾನದಲ್ಲಿ ಆಸೀನನಾಗು.
కీర్తనల గ్రంథము 7 : 8 (ERVTE)
ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.
కీర్తనల గ్రంథము 7 : 9 (ERVTE)
ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.
కీర్తనల గ్రంథము 7 : 10 (ERVTE)
ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು.
కీర్తనల గ్రంథము 7 : 11 (ERVTE)
ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು.
కీర్తనల గ్రంథము 7 : 12 (ERVTE)
ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ.
కీర్తనల గ్రంథము 7 : 13 (ERVTE)
ದುಷ್ಟರನ್ನು ಶಿಕ್ಷಿಸಲು ಆತನು ಸಿದ್ಧನಾಗಿದ್ದಾನೆ.[* ಆತನು … ಸಿದ್ಧನಾಗಿದ್ದಾನೆ ಅಕ್ಷರಶಃ, “ಆತನು ಹಿಂತಿರುಗಿಕೊಳ್ಳುವುದಿಲ್ಲ. ಆತನು ತನ್ನ ಖಡ್ಗವನ್ನು ಹರಿತಗೊಳಿಸುವನು. ಆತನು ತನ್ನ ಬಿಲ್ಲನ್ನು ಹೂಡಿ ಗುರಿಯಿಟ್ಟಿದ್ದಾನೆ. ಆತನು ಮರಣಕರವಾದ ಆಯುಧವನ್ನು ಸಿದ್ಧಗೊಳಿಸಿದ್ದಾನೆ. ಆತನು ತನ್ನ ಅಗ್ನಿಬಾಣಗಳನ್ನು ಮಾಡಿದ್ದಾನೆ.” ]
కీర్తనల గ్రంథము 7 : 14 (ERVTE)
ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು.
కీర్తనల గ్రంథము 7 : 15 (ERVTE)
ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು.
కీర్తనల గ్రంథము 7 : 16 (ERVTE)
ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.
కీర్తనల గ్రంథము 7 : 17 (ERVTE)
ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು.
❮
❯
1
2
3
4
5
6
7
8
9
10
11
12
13
14
15
16
17