కీర్తనల గ్రంథము 74 : 1 (ERVTE)
*ರಚನೆಗಾರ: ಆಸಾಫ. *ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?
కీర్తనల గ్రంథము 74 : 2 (ERVTE)
ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ.
కీర్తనల గ్రంథము 74 : 3 (ERVTE)
ಬಹುಕಾಲದಿಂದ ಹಾಳುಬಿದ್ದಿರುವ ಕಟ್ಟಡಗಳ ಬಳಿಗೆ ಆಗಮಿಸು. ಶತ್ರುವು ನಾಶಮಾಡಿದ ನಿನ್ನ ಪವಿತ್ರ ಸ್ಥಳಕ್ಕೆ ಹಿಂತಿರುಗಿ ಬಾ.
కీర్తనల గ్రంథము 74 : 4 (ERVTE)
ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು.
కీర్తనల గ్రంథము 74 : 5 (ERVTE)
ಶತ್ರು ಸೈನಿಕರಾದರೋ ಕಳೆಗುದ್ದಲಿಯಿಂದ ಕಳೆ ಕೀಳುತ್ತಿರುವ ಜನರಂತಿದ್ದಾರೆ.
కీర్తనల గ్రంథము 74 : 6 (ERVTE)
ನಿನ್ನ ಆಲಯದ ಕೆತ್ತನೆ ಕೆಲಸಗಳನ್ನು ಅವರು ಕೊಡಲಿಗಳಿಂದಲೂ ಮಚ್ಚುಗತ್ತಿಗಳಿಂದಲೂ ಕತ್ತರಿಸಿ ಹಾಕಿದರು.
కీర్తనల గ్రంథము 74 : 7 (ERVTE)
ಆ ಸೈನಿಕರು ನಿನ್ನ ಪವಿತ್ರ ಸ್ಥಳವನ್ನು ಸುಟ್ಟು ನೆಲಸಮಮಾಡಿದರು. ಆ ಆಲಯವು ನಿನ್ನ ನಾಮ ಘನತೆಗಾಗಿ ಕಟ್ಟಲ್ಪಟ್ಟಿತ್ತಲ್ಲಾ!
కీర్తనల గ్రంథము 74 : 8 (ERVTE)
ನಮ್ಮನ್ನು ಸಂಪೂರ್ಣವಾಗಿ ಜಜ್ಜಿಹಾಕಲು ಶತ್ರುಗಳು ನಿರ್ಧರಿಸಿ ದೇಶದ ಪ್ರತಿಯೊಂದು ಪವಿತ್ರ ಸ್ಥಳವನ್ನೂ ಸುಟ್ಟುಹಾಕಿದರು.
కీర్తనల గ్రంథము 74 : 9 (ERVTE)
ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.
కీర్తనల గ్రంథము 74 : 10 (ERVTE)
ದೇವರೇ, ಇನ್ನೆಷ್ಟರವರೆಗೆ ಶತ್ರುಗಳು ನಮ್ಮನ್ನು ಗೇಲಿಮಾಡುತ್ತಿರಬೇಕು? ನಿನ್ನ ಹೆಸರಿಗೆ ಅವರು ಅವಮಾನ ಮಾಡುತ್ತಲೇ ಇರಬೇಕೇ?
కీర్తనల గ్రంథము 74 : 11 (ERVTE)
ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ!
కీర్తనల గ్రంథము 74 : 12 (ERVTE)
ದೇವರೇ, ಬಹುಕಾಲದಿಂದ ನೀನು ನಮ್ಮರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ.
కీర్తనల గ్రంథము 74 : 13 (ERVTE)
ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ.
కీర్తనల గ్రంథము 74 : 14 (ERVTE)
ಲಿವ್ಯಾತಾನನ ತಲೆಗಳನ್ನು ಜಜ್ಜಿಹಾಕಿ ಪ್ರಾಣಿಗಳಿಗೆ ಆಹಾರವನ್ನಾಗಿ ಮಾಡಿದಾತನು ನೀನೇ.
కీర్తనల గ్రంథము 74 : 15 (ERVTE)
ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.
కీర్తనల గ్రంథము 74 : 16 (ERVTE)
ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ.
కీర్తనల గ్రంథము 74 : 17 (ERVTE)
ಭೂಮಿಯ ಮೇಲೆ ಮೇರೆಗಳನ್ನು ಹಾಕಿರುವಾತನು ನೀನೇ. ಬೇಸಿಗೆಕಾಲವನ್ನೂ ಚಳಿಗಾಲವನ್ನೂ ನಿರ್ಮಿಸಿದಾತನು ನೀನೇ.
కీర్తనల గ్రంథము 74 : 18 (ERVTE)
ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.
కీర్తనల గ్రంథము 74 : 19 (ERVTE)
ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. ನಿನ್ನ ಬಡಜನರನ್ನು ಮರೆತುಬಿಡಬೇಡ.
కీర్తనల గ్రంథము 74 : 20 (ERVTE)
ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ.
కీర్తనల గ్రంథము 74 : 21 (ERVTE)
ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. ಅವರಿಗೆ ಕೇಡಾಗಲು ಬಿಡಬೇಡ. ನಿನ್ನ ಬಡಜನರೂ ನಿಸ್ಸಹಾಯಕರೂ ನಿನ್ನನ್ನು ಕೊಂಡಾಡಲಿ.
కీర్తనల గ్రంథము 74 : 22 (ERVTE)
ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ!
కీర్తనల గ్రంథము 74 : 23 (ERVTE)
ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23