కీర్తనల గ్రంథము 75 : 1 (ERVTE)
*ಸ್ತುತಿಗೀತೆ. ರಚನೆಗಾರ: ಆಸಾಫ. *ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
కీర్తనల గ్రంథము 75 : 2 (ERVTE)
ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ.
కీర్తనల గ్రంథము 75 : 3 (ERVTE)
ಭೂಮಿಯು ಅದರ ಮೇಲಿರುವ ಸಮಸ್ತದೊಡನೆ ನಡುಗುತ್ತಿದ್ದರೂ ಭೂಸ್ತಂಭಗಳನ್ನು ಸ್ಥಿರಗೊಳಿಸುವಾತನು ನಾನೇ.
కీర్తనల గ్రంథము 75 : 4 (ERVTE)
(4-5)“ಗರ್ವಿಷ್ಠರೇ, ‘ಕೊಚ್ಚಿಕೊಳ್ಳಬೇಡಿ’ ದುಷ್ಟರೇ, ‘ಅಹಂಕಾರ ಪಡಬೇಡಿ! ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿ’ ” ಎಂದು ಹೇಳುವೆನು.
కీర్తనల గ్రంథము 75 : 5 (ERVTE)
కీర్తనల గ్రంథము 75 : 6 (ERVTE)
ಭೂಲೋಕದ ಯಾವ ಶಕ್ತಿಯೂ ಮನುಷ್ಯನನ್ನು ಉದ್ಧಾರ ಮಾಡಲಾರದು.
కీర్తనల గ్రంథము 75 : 7 (ERVTE)
ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
కీర్తనల గ్రంథము 75 : 8 (ERVTE)
ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!
కీర్తనల గ్రంథము 75 : 9 (ERVTE)
ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
కీర్తనల గ్రంథము 75 : 10 (ERVTE)
ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.

1 2 3 4 5 6 7 8 9 10