కీర్తనల గ్రంథము 80 : 1 (ERVTE)
*ಸ್ತುತಿಗೀತೆ. ರಚನೆಗಾರ: ಆಸಾಫ. *ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.
కీర్తనల గ్రంథము 80 : 2 (ERVTE)
ಇಸ್ರೇಲನ್ನು ಕಾಯುವ ಕುರುಬನೇ, ನಿನ್ನ ಮಹತ್ವವನ್ನು ಎಫ್ರಾಯೀಮನಿಗೂ ಬೆನ್ಯಾಮೀನನಿಗೂ ಮನಸ್ಸೆಗೂ ತೋರಿಸು. ಬಂದು ನಮ್ಮನ್ನು ರಕ್ಷಿಸು.
కీర్తనల గ్రంథము 80 : 3 (ERVTE)
ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸು. ನಮ್ಮನ್ನು ರಕ್ಷಿಸು! ನಮ್ಮನ್ನು ಸ್ವೀಕರಿಸು!
కీర్తనల గ్రంథము 80 : 4 (ERVTE)
ಸೇನಾಧೀಶ್ವರನಾದ ಯೆಹೋವನೇ, ಇನ್ನೆಷ್ಟರವರೆಗೆ ನಮ್ಮ ಮೇಲೆ ಕೋಪದಿಂದಿರುವೆ? ನಮ್ಮ ಪ್ರಾರ್ಥನೆಗಳಿಗೆ ಯಾವಾಗ ಕಿವಿಗೊಡುವೆ?
కీర్తనల గ్రంథము 80 : 5 (ERVTE)
ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.
కీర్తనల గ్రంథము 80 : 6 (ERVTE)
ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.
కీర్తనల గ్రంథము 80 : 7 (ERVTE)
ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ. ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.
కీర్తనల గ్రంథము 80 : 8 (ERVTE)
ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.
కీర్తనల గ్రంథము 80 : 9 (ERVTE)
“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
కీర్తనల గ్రంథము 80 : 10 (ERVTE)
ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು.
కీర్తనల గ్రంథము 80 : 11 (ERVTE)
ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು. ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು.
కీర్తనల గ్రంథము 80 : 12 (ERVTE)
ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.
కీర్తనల గ్రంథము 80 : 13 (ERVTE)
ಕಾಡುಹಂದಿಗಳು ಬಂದು ನಿನ್ನ “ದ್ರಾಕ್ಷಾಲತೆ”ಯ ಮೇಲೆ ನಡೆಯುತ್ತವೆ. ಕಾಡುಪ್ರಾಣಿಗಳು ಬಂದು ಅವುಗಳ ಎಲೆಗಳನ್ನು ತಿನ್ನುತ್ತವೆ.
కీర్తనల గ్రంథము 80 : 14 (ERVTE)
ಸೇನಾಧೀಶ್ವರನಾದ ದೇವರೇ, ಹಿಂತಿರುಗಿ ಬಾ. ಪರಲೋಕದಿಂದ ನಿನ್ನ “ದ್ರಾಕ್ಷಾಲತೆ”ಯನ್ನು ನೋಡಿ ಅದನ್ನು ಸಂರಕ್ಷಿಸು.
కీర్తనల గ్రంథము 80 : 15 (ERVTE)
ನಿನ್ನ ಸ್ವಂತ ಕೈಗಳಿಂದ ನೀನು ನೆಟ್ಟ “ದ್ರಾಕ್ಷಾಲತೆ”ಯನ್ನು ನೋಡು. ನೀನು ಬೆಳೆಸಿದ ಎಳೆ ಸಸಿಯನ್ನು[* ಎಳೆ ಸಸಿ ಅಕ್ಷರಶಃ, “ಮಗನು.” ] ನೋಡು.
కీర్తనల గ్రంథము 80 : 16 (ERVTE)
ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.
కీర్తనల గ్రంథము 80 : 17 (ERVTE)
ನೀನು ಆರಿಸಿಕೊಂಡಿರುವಾತನ[† ಆರಿಸಿಕೊಂಡಿರುವಾತನ ಅಕ್ಷರಶಃ, “ನಿನ್ನ ಬಲಗಡೆಯಲ್ಲಿ ನಿಂತಿರುವವನ.” ] ಕಡೆಗೆ ಕೈಚಾಚಿ ಸಹಾಯ ಮಾಡು. ನೀನು ಬೆಳೆಸಿದ ಜನರ [‡ ಜನರ ಅಕ್ಷರಶಃ, “ನರಪುತ್ರ.” ] ಕಡೆಗೆ ಕೈಚಾಚು.
కీర్తనల గ్రంథము 80 : 18 (ERVTE)
ಆಗ ನಾವು ನಿನ್ನನ್ನು ಎಂದಿಗೂ ತ್ಯಜಿಸುವುದಿಲ್ಲ. ನಮ್ಮನ್ನು ಬದುಕಿಸು. ನಾವು ಬದುಕುವಂತೆ ಮಾಡು, ಆಗ ನಾವು ನಿನ್ನನ್ನು ಆರಾಧಿಸುವೆವು.
కీర్తనల గ్రంథము 80 : 19 (ERVTE)
ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ, ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.
❮
❯
1
2
3
4
5
6
7
8
9
10
11
12
13
14
15
16
17
18
19