కీర్తనల గ్రంథము 83 : 1 (ERVTE)
*ಸ್ತುತಿಗೀತೆ. ರಚನೆಗಾರ: ಆಸಾಫ. *ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು.
కీర్తనల గ్రంథము 83 : 2 (ERVTE)
ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ. ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.
కీర్తనల గ్రంథము 83 : 3 (ERVTE)
ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ.
కీర్తనల గ్రంథము 83 : 4 (ERVTE)
ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.”
కీర్తనల గ్రంథము 83 : 5 (ERVTE)
ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ.
కీర్తనల గ్రంథము 83 : 6 (ERVTE)
(6-7)ಅವರು ಯಾರೆಂದರೆ: ಎದೋಮ್ಯರು, ಇಷ್ಮಾಯೇಲ್ಯರು, ಮೋವಾಬ್ಯರು ಮತ್ತು ಹಗ್ರೀಯ ಸಂತತಿಯವರು, ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು. ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿಬಂದಿದ್ದಾರೆ.
కీర్తనల గ్రంథము 83 : 7 (ERVTE)
కీర్తనల గ్రంథము 83 : 8 (ERVTE)
ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.
కీర్తనల గ్రంథము 83 : 9 (ERVTE)
ನೀನು ಮಿದ್ಯಾನ್ಯರನ್ನೂ ಕೀಷೋನ್ ನದಿಯ ಸಮೀಪದಲ್ಲಿ ಸೀಸೆರನನ್ನೂ ಯಾಬೀನನನ್ನೂ ಸೋಲಿಸಿದಂತೆ ಅವರನ್ನು ಸೋಲಿಸು.
కీర్తనల గ్రంథము 83 : 10 (ERVTE)
ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.
కీర్తనల గ్రంథము 83 : 11 (ERVTE)
ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.
కీర్తనల గ్రంథము 83 : 12 (ERVTE)
ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟಬೇಕೆಂದಿದ್ದರು.
కీర్తనల గ్రంథము 83 : 13 (ERVTE)
ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.
కీర్తనల గ్రంథము 83 : 14 (ERVTE)
ಕಾಡನ್ನು ನಾಶಮಾಡುವ ಬೆಂಕಿಯಂತೆಯೂ ಬೆಟ್ಟಗಳನ್ನು ಸುಟ್ಟುಹಾಕುವ ಅಗ್ನಿಜ್ವಾಲೆಯಂತೆಯೂ ಅವರನ್ನು ನಾಶಮಾಡು.
కీర్తనల గ్రంథము 83 : 15 (ERVTE)
ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು.
కీర్తనల గ్రంథము 83 : 16 (ERVTE)
ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.
కీర్తనల గ్రంథము 83 : 17 (ERVTE)
ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ. ಅವರು ಅವಮಾನಗೊಂಡು ನಾಶವಾಗಲಿ.
కీర్తనల గ్రంథము 83 : 18 (ERVTE)
ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.
❮
❯
1
2
3
4
5
6
7
8
9
10
11
12
13
14
15
16
17
18