కీర్తనల గ్రంథము 91 : 1 (ERVTE)
ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
కీర్తనల గ్రంథము 91 : 2 (ERVTE)
ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.
కీర్తనల గ్రంథము 91 : 3 (ERVTE)
ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
కీర్తనల గ్రంథము 91 : 4 (ERVTE)
ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.
కీర్తనల గ్రంథము 91 : 5 (ERVTE)
ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.
కీర్తనల గ్రంథము 91 : 6 (ERVTE)
ಕತ್ತಲೆಯಲ್ಲಿ ಬರುವ ರೋಗಗಳಿಗಾಗಲಿ ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲಿ ನೀನು ಹೆದರಬೇಕಿಲ್ಲ.
కీర్తనల గ్రంథము 91 : 7 (ERVTE)
ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.
కీర్తనల గ్రంథము 91 : 8 (ERVTE)
ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ದಂಡನೆಯಾಯಿತೆಂದು ತಿಳಿದುಕೊಳ್ಳುವೆ.
కీర్తనల గ్రంథము 91 : 9 (ERVTE)
ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.
కీర్తనల గ్రంథము 91 : 10 (ERVTE)
ಯಾವ ಕೇಡೂ ನಿನಗೆ ಸಂಭವಿಸದು. ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.
కీర్తనల గ్రంథము 91 : 11 (ERVTE)
ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.
కీర్తనల గ్రంథము 91 : 12 (ERVTE)
ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
కీర్తనల గ్రంథము 91 : 13 (ERVTE)
ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.
కీర్తనల గ్రంథము 91 : 14 (ERVTE)
ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.
కీర్తనల గ్రంథము 91 : 15 (ERVTE)
ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.
కీర్తనల గ్రంథము 91 : 16 (ERVTE)
ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”
❮
❯
1
2
3
4
5
6
7
8
9
10
11
12
13
14
15
16