ప్రకటన గ్రంథము 13 : 1 (ERVTE)
{#1ಎರಡು ಪ್ರಾಣಿಗಳು } ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.
ప్రకటన గ్రంథము 13 : 2 (ERVTE)
ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.
ప్రకటన గ్రంథము 13 : 3 (ERVTE)
ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.
ప్రకటన గ్రంథము 13 : 4 (ERVTE)
ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.
ప్రకటన గ్రంథము 13 : 5 (ERVTE)
ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.
ప్రకటన గ్రంథము 13 : 6 (ERVTE)
ಆ ಮೃಗವು ದೇವರಿಗೆ ಅಪಮಾನ ಮಾಡಲು ತನ್ನ ಬಾಯನ್ನು ತೆರೆಯಿತು. ಅಲ್ಲದೆ ದೇವರ ಹೆಸರಿನ ವಿರುದ್ಧವಾಗಿಯೂ ದೇವರು ವಾಸಿಸುವ ಸ್ಥಳದ ವಿರುದ್ಧವಾಗಿಯೂ ಪರಲೋಕದಲ್ಲಿ ಜೀವಿಸುವ ಜನರೆಲ್ಲರ ವಿರುದ್ಧವಾಗಿಯೂ ದೂಷಣೆ ಮಾಡಿತು.
ప్రకటన గ్రంథము 13 : 7 (ERVTE)
ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.
ప్రకటన గ్రంథము 13 : 8 (ERVTE)
ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.
ప్రకటన గ్రంథము 13 : 9 (ERVTE)
ಇವುಗಳನ್ನು ಕೇಳುವವನು ಗಮನವಿಟ್ಟು ಆಲಿಸಲಿ:
ప్రకటన గ్రంథము 13 : 10 (ERVTE)
ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.
ప్రకటన గ్రంథము 13 : 11 (ERVTE)
ನಂತರ ಭೂಮಿಯಿಂದ ಹೊರಗೆ ಬರುತ್ತಿರುವ ಮತ್ತೊಂದು ಮೃಗವನ್ನು ನಾನು ನೋಡಿದೆನು. ಅದಕ್ಕೆ ಟಗರಿನಂತೆ ಎರಡು ಕೊಂಬುಗಳಿದ್ದವು. ಆದರೆ ಅದು ಘಟಸರ್ಪದಂತೆ ಮಾತಾಡುತ್ತಿತ್ತು.
ప్రకటన గ్రంథము 13 : 12 (ERVTE)
ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.
ప్రకటన గ్రంథము 13 : 13 (ERVTE)
ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.
ప్రకటన గ్రంథము 13 : 14 (ERVTE)
ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.
ప్రకటన గ్రంథము 13 : 15 (ERVTE)
ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.
ప్రకటన గ్రంథము 13 : 16 (ERVTE)
ಎರಡನೆಯ ಮೃಗವು ಸಹ ಎಲ್ಲರನ್ನು ಅಂದರೆ ಚಿಕ್ಕವರನ್ನು, ದೊಡ್ಡವರನ್ನು, ಶ್ರೀಮಂತರನ್ನು, ಬಡವರನ್ನು, ಗುಲಾಮರನ್ನು ಮತ್ತು ಸ್ವತಂತ್ರರನ್ನು, ತಮ್ಮ ಬಲಗೈಯ ಮೇಲಾಗಲಿ ಅಥವಾ ತಮ್ಮ ಹಣೆಗಳ ಮೇಲಾಗಲಿ ಗುರುತು ಹಾಕಿಕೊಳ್ಳಬೇಕೆಂದು ಒತ್ತಾಯಪಡಿಸಿತು.
ప్రకటన గ్రంథము 13 : 17 (ERVTE)
ಈ ಗುರುತಿಲ್ಲದೆ ಯಾರೂ ಕೊಳ್ಳುವಂತಿಲ್ಲ ಮತ್ತು ಮಾರುವಂತಿಲ್ಲ. ಈ ಗುರುತು ಏನೆಂದರೆ ಆ ಮೃಗದ ಹೆಸರು ಅಥವಾ ಅದರ ಹೆಸರಿನ ಸಂಖ್ಯೆ.
ప్రకటన గ్రంథము 13 : 18 (ERVTE)
ತಿಳುವಳಿಕೆಯುಳ್ಳ ಮನುಷ್ಯನು ಮೃಗದ ಸಂಖ್ಯೆಯ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ. ಇಲ್ಲಿ ಜ್ಞಾನದ ಅಗತ್ಯವಿದೆ. ಈ ಸಂಖ್ಯೆಯು ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆ 666

1 2 3 4 5 6 7 8 9 10 11 12 13 14 15 16 17 18