ప్రకటన గ్రంథము 17 : 1 (ERVTE)
{#1ಮೃಗದ ಮೇಲಿದ್ದ ಸ್ತ್ರೀ } ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.
ప్రకటన గ్రంథము 17 : 2 (ERVTE)
ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು.
ప్రకటన గ్రంథము 17 : 3 (ERVTE)
ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
ప్రకటన గ్రంథము 17 : 4 (ERVTE)
ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.
ప్రకటన గ్రంథము 17 : 5 (ERVTE)
ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: **ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.
ప్రకటన గ్రంథము 17 : 6 (ERVTE)
ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು.
ప్రకటన గ్రంథము 17 : 7 (ERVTE)
ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ.
ప్రకటన గ్రంథము 17 : 8 (ERVTE)
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
ప్రకటన గ్రంథము 17 : 9 (ERVTE)
“ಇದನ್ನು ಅರ್ಥಮಾಡಿಕೊಳ್ಳಲು ನಿನಗೆ ಬುದ್ಧಿ ಬೇಕು. ಆ ಮೃಗದ ಏಳು ತಲೆಗಳೇ ಆ ಸ್ತ್ರೀಯು ಕುಳಿತುಕೊಳ್ಳುವ ಏಳು ಬೆಟ್ಟಗಳಾಗಿವೆ. ಅವು ಏಳು ಮಂದಿ ರಾಜರುಗಳೂ ಆಗಿವೆ.
ప్రకటన గ్రంథము 17 : 10 (ERVTE)
ಐದು ಮಂದಿ ರಾಜರುಗಳು ಈಗಾಗಲೇ ಸತ್ತಿದ್ದಾರೆ. ಒಬ್ಬ ರಾಜನು ಮಾತ್ರ ಈಗ ಜೀವಿಸಿದ್ದಾನೆ. ಕೊನೆಯ ರಾಜನು ಬರುತ್ತಾನೆ. ಅವನು ಬಂದು ಸ್ವಲ್ಪಕಾಲ ಮಾತ್ರ ಇರುತ್ತಾನೆ.
ప్రకటన గ్రంథము 17 : 11 (ERVTE)
ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.
ప్రకటన గ్రంథము 17 : 12 (ERVTE)
“ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.
ప్రకటన గ్రంథము 17 : 13 (ERVTE)
ಈ ಹತ್ತು ರಾಜರುಗಳೆಲ್ಲರೂ ಒಂದೇ ಉದ್ದೇಶವುಳ್ಳವರಾಗಿದ್ದಾರೆ. ಅವರು ತಮ್ಮ ಶಕ್ತಿಯನ್ನು ಮತ್ತು ಅಧಿಕಾರವನ್ನು ಮೃಗಕ್ಕೆ ಕೊಡುತ್ತಾರೆ.
ప్రకటన గ్రంథము 17 : 14 (ERVTE)
ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.
ప్రకటన గ్రంథము 17 : 15 (ERVTE)
ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.
ప్రకటన గ్రంథము 17 : 16 (ERVTE)
ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.
ప్రకటన గ్రంథము 17 : 17 (ERVTE)
ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ.
ప్రకటన గ్రంథము 17 : 18 (ERVTE)
ನೀನು ನೋಡಿದ ಸ್ತ್ರೀಯು ಲೋಕದ ರಾಜರುಗಳನ್ನು ಆಳುವ ಮಹಾನಗರಿಯಾಗಿದ್ದಾಳೆ.”
❮
❯
1
2
3
4
5
6
7
8
9
10
11
12
13
14
15
16
17
18