ప్రకటన గ్రంథము 21 : 1 (ERVTE)
{#1ನೂತನ ಜೆರುಸಲೇಮ್ } ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು[* ನೂತನ … ಭೂಮಿಯನ್ನು ನೋಡಿರಿ: ಯೆಶಾಯ 65:17; 66:22; 2 ಪೇತ್ರ 3: 13 ] ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.
ప్రకటన గ్రంథము 21 : 2 (ERVTE)
ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.
ప్రకటన గ్రంథము 21 : 3 (ERVTE)
ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.
ప్రకటన గ్రంథము 21 : 4 (ERVTE)
ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.
ప్రకటన గ్రంథము 21 : 5 (ERVTE)
ప్రకటన గ్రంథము 21 : 6 (ERVTE)
ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು. ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.
ప్రకటన గ్రంథము 21 : 7 (ERVTE)
ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.
ప్రకటన గ్రంథము 21 : 8 (ERVTE)
ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”
ప్రకటన గ్రంథము 21 : 9 (ERVTE)
ಕಡೆಯ ಏಳು ಉಪದ್ರವಗಳನ್ನು ತಮ್ಮ ಪಾತ್ರೆಗಳಲ್ಲಿ ತುಂಬಿಕೊಂಡಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ನನ್ನ ಬಳಿಗೆ ಬಂದು, “ನನ್ನ ಸಂಗಡ ಬಾ. ಕುರಿಮರಿಯಾದಾತನ ಪತ್ನಿಯಾಗಲಿರುವ ವಧುವನ್ನು ನಾನು ನಿನಗೆ ತೋರಿಸುತ್ತೇನೆ” ಎಂದನು.
ప్రకటన గ్రంథము 21 : 10 (ERVTE)
ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.
ప్రకటన గ్రంథము 21 : 11 (ERVTE)
ಆ ನಗರವು ದೇವರ ಪ್ರಭಾವದಿಂದ ಪ್ರಕಾಶಿಸುತ್ತಿತ್ತು. ಅದು ಬಹು ಬೆಲೆಬಾಳುವ ವಜ್ರದಂತೆ ಪ್ರಕಾಶಿಸುತ್ತಿತ್ತು. ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು.
ప్రకటన గ్రంథము 21 : 12 (ERVTE)
ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.
ప్రకటన గ్రంథము 21 : 13 (ERVTE)
ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.
ప్రకటన గ్రంథము 21 : 14 (ERVTE)
ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.
ప్రకటన గ్రంథము 21 : 15 (ERVTE)
ನನ್ನ ಸಂಗಡ ಮಾತನಾಡಿದ ದೇವದೂತನ ಬಳಿಯಲ್ಲಿ ಚಿನ್ನದ ಅಳತೆಗೋಲಿತ್ತು. ಆ ನಗರವನ್ನು, ಅದರ ಬಾಗಿಲುಗಳನ್ನು ಮತ್ತು ಅದರ ಗೋಡೆಯನ್ನು ದೇವದೂತನು ಆ ಕೋಲಿನಿಂದ ಅಳೆಯುತ್ತಿದ್ದನು.
ప్రకటన గ్రంథము 21 : 16 (ERVTE)
ನಗರವನ್ನು ಚೌಕೋನವಾಗಿ ನಿರ್ಮಿಸಲಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ದೇವದೂತನು ತನ್ನ ಅಳತೆಗೋಲಿನಿಂದ ನಗರವನ್ನು ಅಳೆದನು. ನಗರವು 1,500 ಮೈಲಿ ಉದ್ದ, 1,500 ಮೈಲಿ ಅಗಲ ಮತ್ತು 1,500 ಮೈಲಿ[† 1,500 ಮೈಲಿ ಅಂದರೆ ಸುಮಾರು 2,200 ಕಿಲೋಮೀಟರ್‌ಗಳು. ] ಎತ್ತರವಾಗಿತ್ತು.
ప్రకటన గ్రంథము 21 : 17 (ERVTE)
ದೇವದೂತನು ಗೋಡೆಯನ್ನೂ ಅಳೆದನು. ಅದು ಮನುಷ್ಯರ ಮೊಳದಲ್ಲಿ 144 ಮೊಳವಿತ್ತು.[‡ 144 ಮೊಳ ಅಂದರೆ ಸುಮಾರು 72 ಮೀಟರ್ ಅಥವಾ 210 ಅಡಿಗಳು. ] ದೇವದೂತನು ಉಪಯೋಗಿಸಿದ ಅಳತೆಮಾನವೇ ಅದು.
ప్రకటన గ్రంథము 21 : 18 (ERVTE)
ಗೋಡೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವನ್ನು ಗಾಜಿನಷ್ಟು ಅಪ್ಪಟವಾದ ಚಿನ್ನದಿಂದ ನಿರ್ಮಿಸಲಾಗಿತ್ತು.
ప్రకటన గ్రంథము 21 : 19 (ERVTE)
ನಗರದ ಗೋಡೆಯ ಅಡಿಪಾಯದ ಕಲ್ಲುಗಳಲ್ಲಿ ಸಕಲ ವಿಧವಾದ ಬೆಲೆಬಾಳುವ ರತ್ನಗಳಿದ್ದವು. ಮೊದಲನೆ ಮೂಲೆಗಲ್ಲು ವಜ್ರ, ಎರಡನೆಯದು ವೈಢೂರ್ಯ, ಮೂರನೆಯದು ಪಚ್ಚೆ,
ప్రకటన గ్రంథము 21 : 20 (ERVTE)
ನಾಲ್ಕನೆಯದು ಪದ್ಮರಾಗ, ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ ಮತ್ತು ಹನ್ನೆರಡನೆಯದು ನೀಲಸ್ಫಟಿಕ.
ప్రకటన గ్రంథము 21 : 21 (ERVTE)
ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.
ప్రకటన గ్రంథము 21 : 22 (ERVTE)
ನಾನು ನಗರದಲ್ಲಿ ಒಂದು ಆಲಯವನ್ನೂ ನೋಡಲಿಲ್ಲ. ಸರ್ವಶಕ್ತನಾದ ದೇವರಾದ ಪ್ರಭು ಮತ್ತು ಕುರಿಮರಿಯಾದಾತನು (ಯೇಸು) ನಗರದ ಆಲಯವಾಗಿದ್ದಾರೆ.
ప్రకటన గ్రంథము 21 : 23 (ERVTE)
ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.
ప్రకటన గ్రంథము 21 : 24 (ERVTE)
ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ.
ప్రకటన గ్రంథము 21 : 25 (ERVTE)
ನಗರದ ಬಾಗಿಲುಗಳು ಎಂದಿಗೂ ಮುಚ್ಚುವುದೇ ಇಲ್ಲ. ಏಕೆಂದರೆ ಅಲ್ಲಿ ರಾತ್ರಿಯೇ ಇಲ್ಲ.
ప్రకటన గ్రంథము 21 : 26 (ERVTE)
ಜನಾಂಗಗಳ ವೈಭವ ಮತ್ತು ಗೌರವಗಳು ನಗರಕ್ಕೆ ಬರುತ್ತವೆ.
ప్రకటన గ్రంథము 21 : 27 (ERVTE)
ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27