ప్రకటన గ్రంథము 7 : 1 (ERVTE)
{#1ಇಸ್ರೇಲಿನ 1,44,000 ಜನರು } ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.
ప్రకటన గ్రంథము 7 : 2 (ERVTE)
ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,
ప్రకటన గ్రంథము 7 : 3 (ERVTE)
“ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು.
ప్రకటన గ్రంథము 7 : 4 (ERVTE)
ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.
ప్రకటన గ్రంథము 7 : 5 (ERVTE)
ಯೂದನ ಕುಲದಿಂದ 12,000 ರೂಬೇನನ ಕುಲದಿಂದ 12,000 ಗಾದನ ಕುಲದಿಂದ 12,000
ప్రకటన గ్రంథము 7 : 6 (ERVTE)
ಆಶೇರನ ಕುಲದಿಂದ 12,000 ನಫ್ತಾಲಿಯ ಕುಲದಿಂದ 12,000 ಮನಸ್ಸೆಯ ಕುಲದಿಂದ 12,000
ప్రకటన గ్రంథము 7 : 7 (ERVTE)
ಸಿಮೆಯೋನನ ಕುಲದಿಂದ 12,000 ಲೇವಿಯ ಕುಲದಿಂದ 12,000 ಇಸ್ಸಾಕಾರನ ಕುಲದಿಂದ 12,000
ప్రకటన గ్రంథము 7 : 8 (ERVTE)
ಜೆಬುಲೋನನ ಕುಲದಿಂದ 12,000 ಯೋಸೇಫನ ಕುಲದಿಂದ 12,000 ಬೆನ್ಯಾಮೀನನ ಕುಲದಿಂದ 12,000
ప్రకటన గ్రంథము 7 : 9 (ERVTE)
{#1ಜನರ ಮಹಾಸಮೂಹ } ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.
ప్రకటన గ్రంథము 7 : 10 (ERVTE)
ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು.
ప్రకటన గ్రంథము 7 : 11 (ERVTE)
ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.
ప్రకటన గ్రంథము 7 : 12 (ERVTE)
ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.
ప్రకటన గ్రంథము 7 : 13 (ERVTE)
ప్రకటన గ్రంథము 7 : 14 (ERVTE)
ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು. “ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ.[* ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ ತಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ಅವರು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿದ್ದಾರೆ ಎಂದರ್ಥ. ] ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.
ప్రకటన గ్రంథము 7 : 15 (ERVTE)
ಆದ್ದರಿಂದ ಈ ಜನರು ಈಗ ದೇವರ ಸಿಂಹಾಸನದ ಮುಂದೆ ಇದ್ದಾರೆ. ಅವರು ದೇವರನ್ನು ಆತನ ಆಲಯದಲ್ಲಿ ಹಗಲಿರುಳು ಆರಾಧಿಸುತ್ತಾರೆ. ಸಿಂಹಾಸನದ ಮೇಲೆ ಕುಳಿತಿರುವಾತನು ಅವರನ್ನು ಸಂರಕ್ಷಿಸುತ್ತಾನೆ.
ప్రకటన గ్రంథము 7 : 16 (ERVTE)
ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.
ప్రకటన గ్రంథము 7 : 17 (ERVTE)
ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17