రోమీయులకు 12 : 1 (ERVTE)
{#1ನಿಮ್ಮ ಜೀವಿತಗಳನ್ನು ದೇವರಿಗೆ ಕೊಡಿರಿ } ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.
రోమీయులకు 12 : 2 (ERVTE)
ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
రోమీయులకు 12 : 3 (ERVTE)
ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
రోమీయులకు 12 : 4 (ERVTE)
ಪ್ರತಿಯೊಬ್ಬರಿಗೂ ಒಂದು ದೇಹವಿದೆ. ಆ ದೇಹಕ್ಕೆ ಅನೇಕ ಅಂಗಾಂಗಗಳಿವೆ. ಆ ಅಂಗಾಂಗಗಳು ಒಂದೇ ಕಾರ್ಯವನ್ನು ಮಾಡುವುದಿಲ್ಲ.
రోమీయులకు 12 : 5 (ERVTE)
ಹೀಗೆ ನಮ್ಮಲ್ಲಿ ಅನೇಕರಿದ್ದರೂ ಕ್ರಿಸ್ತನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ನಾವು ಆ ದೇಹದ ಅಂಗಗಳಾಗಿದ್ದೇವೆ. ಆ ದೇಹದ ಪ್ರತಿಯೊಂದು ಅಂಗವು ಇತರ ಅಂಗಗಳಿಗೂ ಸೇರಿಕೊಂಡಿದೆ.
రోమీయులకు 12 : 6 (ERVTE)
ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.
రోమీయులకు 12 : 7 (ERVTE)
ಸೇವೆಮಾಡುವ ವರವನ್ನು ಹೊಂದಿರುವವನು ಸೇವೆಮಾಡಬೇಕು.
రోమీయులకు 12 : 8 (ERVTE)
ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.
రోమీయులకు 12 : 9 (ERVTE)
ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.
రోమీయులకు 12 : 10 (ERVTE)
ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.
రోమీయులకు 12 : 11 (ERVTE)
ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.
రోమీయులకు 12 : 12 (ERVTE)
ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.
రోమీయులకు 12 : 13 (ERVTE)
ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.
రోమీయులకు 12 : 14 (ERVTE)
ನಿಮಗೆ ಕೇಡುಮಾಡುವವರನ್ನು ಶಪಿಸದೆ ಆಶೀರ್ವದಿಸಿರಿ.
రోమీయులకు 12 : 15 (ERVTE)
ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.
రోమీయులకు 12 : 16 (ERVTE)
ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
రోమీయులకు 12 : 17 (ERVTE)
ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.
రోమీయులకు 12 : 18 (ERVTE)
ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.
రోమీయులకు 12 : 19 (ERVTE)
ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ”[✡ ಉಲ್ಲೇಖನ: ಧರ್ಮೋಪದೇಶ. 32: 35 ] ಎಂಬುದಾಗಿ ಬರೆಯಲ್ಪಟ್ಟಿದೆ.
రోమీయులకు 12 : 20 (ERVTE)
ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.”--ಜ್ಞಾನೋಕ್ತಿಗಳು 25:21-22--
రోమీయులకు 12 : 21 (ERVTE)
21 ಕೆಟ್ಟತನವು ನಿಮ್ಮನ್ನು ಸೋಲಿಸುವುದಕ್ಕೆ ಅವಕಾಶಕೊಡದೆ ಒಳ್ಳೆಯದನ್ನು ಮಾಡುವುದರ ಮೂಲಕವಾಗಿ ಕೆಟ್ಟತನವನ್ನು ಸೋಲಿಸಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21