రోమీయులకు 14 : 1 (ERVTE)
{#1ಬೇರೆಯವರನ್ನು ಟೀಕಿಸಬೇಡಿ } ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ.
రోమీయులకు 14 : 2 (ERVTE)
ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ.
రోమీయులకు 14 : 3 (ERVTE)
ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ನಂಬುವ ವ್ಯಕ್ತಿಯು ತರಕಾರಿಯನ್ನು ಮಾತ್ರ ತಿನ್ನುವ ವ್ಯಕ್ತಿಗಿಂತ ತನ್ನನ್ನು ಉತ್ತಮನೆಂದು ಭಾವಿಸಿಕೊಳ್ಳಕೂಡದು. ಅಂತೆಯೇ, ತರಕಾರಿಗಳನ್ನು ಮಾತ್ರ ತಿನ್ನುವ ವ್ಯಕ್ತಿಯು ಎಲ್ಲಾ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯನ್ನು ತಪ್ಪಿತಸ್ಥನೆಂದು ನಿರ್ಣಯಿಸಕೂಡದು. ದೇವರು ಆ ವ್ಯಕ್ತಿಯನ್ನೂ ಸ್ವೀಕರಿಸಿಕೊಂಡಿದ್ದಾನೆ.
రోమీయులకు 14 : 4 (ERVTE)
ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ.
రోమీయులకు 14 : 5 (ERVTE)
ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು.
రోమీయులకు 14 : 6 (ERVTE)
ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.
రోమీయులకు 14 : 7 (ERVTE)
ಹೌದು, ನಾವೆಲ್ಲರೂ ಪ್ರಭುವಿಗೋಸ್ಕರವೇ ಜೀವಿಸುವವರಾಗಿದ್ದೇವೆ. ನಾವು ಜೀವಿಸುವುದಾಗಲಿ ಸಾಯುವುದಾಗಲಿ ನಮಗೋಸ್ಕರವಲ್ಲ.
రోమీయులకు 14 : 8 (ERVTE)
ನಾವು ಬದುಕುವುದಾಗಿದ್ದರೆ, ಪ್ರಭುವಿಗೋಸ್ಕರ ಬದುಕುತ್ತೇವೆ; ಸಾಯುವುದಾಗಿದ್ದರೆ, ಪ್ರಭುವಿಗೋಸ್ಕರ ಸಾಯುತ್ತೇವೆ. ಆದ್ದರಿಂದ ಬದುಕಿದರೂ ಸತ್ತರೂ ನಾವು ಪ್ರಭುವಿಗೆ ಸೇರಿದವರಾಗಿದ್ದೇವೆ.
రోమీయులకు 14 : 9 (ERVTE)
ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು.
రోమీయులకు 14 : 10 (ERVTE)
ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು.
రోమీయులకు 14 : 11 (ERVTE)
ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ ‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.” --ಯೆಶಾಯ 45:23--
రోమీయులకు 14 : 12 (ERVTE)
12 ಆದ್ದರಿಂದ ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮನಮ್ಮ ಜೀವಿತದ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.
రోమీయులకు 14 : 13 (ERVTE)
{#1ಬೇರೆಯವರ ಪಾಪಕ್ಕೆ ನೀವು ಕಾರಣರಾಗಬೇಡಿ } ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.
రోమీయులకు 14 : 14 (ERVTE)
ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ.
రోమీయులకు 14 : 15 (ERVTE)
ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.
రోమీయులకు 14 : 16 (ERVTE)
ನೀನು ಯಾವುದನ್ನು ಒಳ್ಳೆಯದೆಂದು ಆಲೋಚಿಸುವಿಯೋ ಅದು ಬೇರೆಯವರಿಂದ ಕೆಟ್ಟದ್ದು ಎಂಬ ಟೀಕೆಗೆ ಒಳಗಾಗದಂತೆ ಎಚ್ಚರವಹಿಸು.
రోమీయులకు 14 : 17 (ERVTE)
ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.
రోమీయులకు 14 : 18 (ERVTE)
ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.
రోమీయులకు 14 : 19 (ERVTE)
ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.
రోమీయులకు 14 : 20 (ERVTE)
ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು.
రోమీయులకు 14 : 21 (ERVTE)
ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.
రోమీయులకు 14 : 22 (ERVTE)
ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು.
రోమీయులకు 14 : 23 (ERVTE)
ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23