రోమీయులకు 2 : 1 (ERVTE)
{#1ಯೆಹೂದ್ಯರು ಸಹ ಪಾಪಿಗಳು } “ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.
రోమీయులకు 2 : 2 (ERVTE)
ಅಪರಾಧಗಳನ್ನು ಮಾಡುವ ಜನರಿಗೆ ದೇವರು ತೀರ್ಪು ಮಾಡುತ್ತಾನೆ. ಆತನ ತೀರ್ಪು ನ್ಯಾಯವಾದುದೆಂದು ನಮಗೆ ಗೊತ್ತಿದೆ.
రోమీయులకు 2 : 3 (ERVTE)
ಆ ಅಪರಾಧಗಳನ್ನು ಮಾಡುವ ಜನರಿಗೆ ನೀವು ಸಹ ತೀರ್ಪು ಮಾಡುತ್ತೀರಿ. ಆದರೆ ನೀವೇ ಆ ಅಪರಾಧಗಳನ್ನು ಮಾಡುತ್ತೀರಿ. ಹೀಗಿರಲು ದೇವರ ದಂಡನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿದೆ.
రోమీయులకు 2 : 4 (ERVTE)
ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.
రోమీయులకు 2 : 5 (ERVTE)
ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.
రోమీయులకు 2 : 6 (ERVTE)
ದೇವರು ಪ್ರತಿಯೊಬ್ಬರಿಗೂ ಅವರವರು ಮಾಡಿದ ಕಾರ್ಯಗಳಿಗಾಗಿ ಬಹುಮಾನವನ್ನಾಗಲಿ ದಂಡನೆಯನ್ನಾಗಲಿ ಕೊಡುವನು.
రోమీయులకు 2 : 7 (ERVTE)
ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.
రోమీయులకు 2 : 8 (ERVTE)
ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.
రోమీయులకు 2 : 9 (ERVTE)
ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.
రోమీయులకు 2 : 10 (ERVTE)
ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.
రోమీయులకు 2 : 11 (ERVTE)
ದೇವರು ಪಕ್ಷಪಾತ ಮಾಡದೆ ಎಲ್ಲರಿಗೂ ಒಂದೇ ರೀತಿಯಲ್ಲಿ ತೀರ್ಪು ಕೊಡುತ್ತಾನೆ.
రోమీయులకు 2 : 12 (ERVTE)
ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
రోమీయులకు 2 : 13 (ERVTE)
ಧರ್ಮಶಾಸ್ತ್ರವನ್ನು ಕೇಳಿದ ಮಾತ್ರಕ್ಕೆ ಜನರು ನೀತಿವಂತರಾಗುವುದಿಲ್ಲ. ಧರ್ಮಶಾಸ್ತ್ರ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗುವ ಜನರನ್ನು ಧರ್ಮಶಾಸ್ತ್ರವು ನೀತಿವಂತರನ್ನಾಗಿ ಮಾಡುತ್ತದೆ.
రోమీయులకు 2 : 14 (ERVTE)
ಯೆಹೂದ್ಯರಲ್ಲದವರು ಧರ್ಮಶಾಸ್ತ್ರವನ್ನು ಹೊಂದಿಲ್ಲ. ಆದರೆ ಅವರು ಧರ್ಮಶಾಸ್ತ್ರವನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇಯಾದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.
రోమీయులకు 2 : 15 (ERVTE)
ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.
రోమీయులకు 2 : 16 (ERVTE)
రోమీయులకు 2 : 17 (ERVTE)
ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ. {#1ಯೆಹೂದ್ಯರು ಮತ್ತು ಧರ್ಮಶಾಸ್ತ್ರ } “ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.
రోమీయులకు 2 : 18 (ERVTE)
ದೇವರ ಚಿತ್ತಕ್ಕನುಸಾರವಾದ ಕಾರ್ಯಗಳನ್ನು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ನೀನು ಹೇಳಿಕೊಳ್ಳುವೆ.
రోమీయులకు 2 : 19 (ERVTE)
ಸರಿಯಾದ ಮಾರ್ಗವನ್ನು ತಿಳಿದಿಲ್ಲದ ಜನರಿಗೆ ಮಾರ್ಗದರ್ಶಕನಾಗಿಯೂ ಕತ್ತಲೆಯಲ್ಲಿರುವ ಜನರಿಗೆ ಬೆಳಕಾಗಿಯೂ ಇರುವುದಾಗಿ ನಿನ್ನ ಕುರಿತು ಭಾವಿಸಿಕೊಂಡಿರುವೆ.
రోమీయులకు 2 : 20 (ERVTE)
ಮೂಢರಿಗೆ ಶಿಕ್ಷಕನೆಂತಲೂ ಕಲಿಯಬೇಕಾದವರಿಗೆ ಉಪಾಧ್ಯಾಯನೆಂತಲೂ ನೀನು ನಿನ್ನ ಬಗ್ಗೆ ಆಲೋಚಿಸಿಕೊಂಡಿರುವೆ. ನಿನ್ನಲ್ಲಿ ಧರ್ಮಶಾಸ್ತ್ರವಿದೆ, ಆದ್ದರಿಂದ ಪ್ರತಿಯೊಂದನ್ನೂ ತಿಳಿದುಕೊಂಡಿರುವುದಾಗಿಯೂ ಎಲ್ಲಾ ಸತ್ಯವನ್ನು ಹೊಂದಿಕೊಂಡಿರುವುದಾಗಿಯೂ ನೀನು ಭಾವಿಸಿಕೊಂಡಿರುವೆ.
రోమీయులకు 2 : 21 (ERVTE)
ನೀನು ಬೇರೆಯವರಿಗೆ ಉಪದೇಶಿಸುವೆ. ಹೀಗಿರಲು ನೀನು ನಿನಗೇ ಉಪದೇಶ ಮಾಡಿಕೊಳ್ಳಬಾರದೇಕೆ? ಕದಿಯಬಾರದೆಂದು ನೀನು ಜನರಿಗೆ ಹೇಳುವೆ, ಆದರೆ ನೀನೇ ಕದಿಯುವೆ.
రోమీయులకు 2 : 22 (ERVTE)
ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ.
రోమీయులకు 2 : 23 (ERVTE)
ನೀನು ದೇವರ ಧರ್ಮಶಾಸ್ತ್ರದ ಬಗ್ಗೆ ಹೆಮ್ಮೆಪಡುವೆ. ಆದರೆ ಆ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೇವರಿಗೆ ಅವಮಾನ ಮಾಡುವೆ.
రోమీయులకు 2 : 24 (ERVTE)
“ಯೆಹೂದ್ಯರಾದ ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದ ಜನರು ದೇವರ ಹೆಸರಿಗೆ ವಿರೋಧವಾಗಿ ಮಾತಾಡುತ್ತಾರೆ”[✡ ಉಲ್ಲೇಖನ: ಯೆಶಾಯ 52:5; ಯೆಹೆಜ್ಕೇಲ 36: 20 ] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
రోమీయులకు 2 : 25 (ERVTE)
ನೀನು ಧರ್ಮಶಾಸ್ತ್ರವನ್ನು ಅನುಸರಿಸಿದರೆ ನೀನು ಮಾಡಿಸಿಕೊಂಡ ಸುನ್ನತಿಗೆ ಅರ್ಥವಿದೆ. ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದರೆ ನಿನಗೆ ಸುನ್ನತಿಯಾಗಿಲ್ಲದಂತೆಯೇ ಆಯಿತು.
రోమీయులకు 2 : 26 (ERVTE)
ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು.
రోమీయులకు 2 : 27 (ERVTE)
ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.
రోమీయులకు 2 : 28 (ERVTE)
ಕೇವಲ ಬಾಹ್ಯ ದೇಹದಲ್ಲಿ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಕೇವಲ ದೇಹದ ಹೊರಭಾಗದ ಸುನ್ನತಿಯು ನಿಜವಾದ ಸುನ್ನತಿಯಲ್ಲ.
రోమీయులకు 2 : 29 (ERVTE)
ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29