రోమీయులకు 3 : 1 (ERVTE)
ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ?
రోమీయులకు 3 : 2 (ERVTE)
ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.
రోమీయులకు 3 : 3 (ERVTE)
ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?
రోమీయులకు 3 : 4 (ERVTE)
ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.” --ಕೀರ್ತನೆ. 51:4--
రోమీయులకు 3 : 5 (ERVTE)
ದೇವರು ನ್ಯಾಯವಂತನೆಂಬುದನ್ನು ನಾವು ಮಾಡುವ ತಪ್ಪು ಮತ್ತಷ್ಟು ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಹೀಗಿರಲು, ದೇವರು ನಮ್ಮನ್ನು ಶಿಕ್ಷಿಸುವಾಗ, ಆತನು ಅನ್ಯಾಯ ಮಾಡುತ್ತಿದ್ದಾನೆಂದು ನಾವು ಹೇಳಲು ಸಾಧ್ಯವೇ? (ಬೇರೆ ಕೆಲವು ಜನರಿಗೆ ಇರಬಹುದಾದ ಆಲೋಚನೆಯನ್ನೇ ನಾನು ಇಲ್ಲಿ ಹೇಳುತ್ತಿದ್ದೇನೆ.)
రోమీయులకు 3 : 6 (ERVTE)
ಇಲ್ಲ! ದೇವರು ನಮ್ಮನ್ನು ದಂಡಿಸಲಾಗದಿದ್ದರೆ, ದೇವರು ಲೋಕಕ್ಕೆ ತೀರ್ಪುಮಾಡಲಾಗುವುದಿಲ್ಲ.
రోమీయులకు 3 : 7 (ERVTE)
“ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.
రోమీయులకు 3 : 8 (ERVTE)
“ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.
రోమీయులకు 3 : 9 (ERVTE)
{#1ಎಲ್ಲಾ ಜನರು ಅಪರಾಧಿಗಳಾಗಿದ್ದಾರೆ } ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.
రోమీయులకు 3 : 10 (ERVTE)
ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಪಾಪವಿಲ್ಲದ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!
రోమీయులకు 3 : 11 (ERVTE)
ಅರ್ಥಮಾಡಿಕೊಳ್ಳುವ ಒಬ್ಬನೂ ಇಲ್ಲ. ದೇವರೊಂದಿಗಿರಲು ನಿಜವಾಗಿ ಬಯಸುವ ಒಬ್ಬನೂ ಇಲ್ಲ.
రోమీయులకు 3 : 12 (ERVTE)
ಎಲ್ಲಾ ಜನರು ದಾರಿ ತಪ್ಪಿದ್ದಾರೆ. ಎಲ್ಲಾ ಜನರು ಅಯೋಗ್ಯರಾಗಿದ್ದಾರೆ. ಒಳ್ಳೆಯದನ್ನು ಮಾಡುವ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!” --ಕೀರ್ತನೆ. 14:1-3--
రోమీయులకు 3 : 13 (ERVTE)
“ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” --ಕೀರ್ತನೆ. 5:9-- “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.” --ಕೀರ್ತನೆ. 140:3--
రోమీయులకు 3 : 14 (ERVTE)
“ಅವರ ಬಾಯಿಗಳಲ್ಲಿ ಶಾಪವೂ ಕಠೋರತೆಯೂ ತುಂಬಿವೆ.” --ಕೀರ್ತನೆ. 10:7--
రోమీయులకు 3 : 15 (ERVTE)
“ಹಿಂಸಿಸಲು ಮತ್ತು ಕೊಲ್ಲಲು ಜನರು ಯಾವಾಗಲೂ ಸಿದ್ಧರಾಗಿದ್ದಾರೆ.
రోమీయులకు 3 : 16 (ERVTE)
ಅವರು ಹೋದಲ್ಲೆಲ್ಲಾ ನಾಶನವನ್ನೂ ಸಂಕಟವನ್ನೂ ಬರಮಾಡುತ್ತಾರೆ.
రోమీయులకు 3 : 17 (ERVTE)
ಜನರು ಶಾಂತಿಯ ಮಾರ್ಗವನ್ನು ತಿಳಿದಿಲ್ಲ.” --ಯೆಶಾಯ 59:7-8--
రోమీయులకు 3 : 18 (ERVTE)
“ಅವರಿಗೆ ದೇವರಲ್ಲಿ ಭಯವಾಗಲಿ ಗೌರವವಾಗಲಿ ಇಲ್ಲ.” --ಕೀರ್ತನೆ. 36:1--
రోమీయులకు 3 : 19 (ERVTE)
ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.
రోమీయులకు 3 : 20 (ERVTE)
ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.
రోమీయులకు 3 : 21 (ERVTE)
{#1ದೇವರು ಜನರನ್ನು ನೀತಿವಂತರನ್ನಾಗಿ ಮಾಡುವ ಬಗೆ } ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.
రోమీయులకు 3 : 22 (ERVTE)
ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.
రోమీయులకు 3 : 23 (ERVTE)
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ.
రోమీయులకు 3 : 24 (ERVTE)
ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.
రోమీయులకు 3 : 25 (ERVTE)
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
రోమీయులకు 3 : 26 (ERVTE)
ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.
రోమీయులకు 3 : 27 (ERVTE)
ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.
రోమీయులకు 3 : 28 (ERVTE)
ಏಕೆಂದರೆ ಒಬ್ಬನು ನೀತಿವಂತನಾಗುವುದು ನಂಬಿಕೆಯ ಮೂಲಕವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಲು ಅವನು ಮಾಡಿದ ಕಾರ್ಯಗಳಿಂದಲ್ಲ. ನಾವು ನಂಬುವುದೂ ಇದನ್ನೇ.
రోమీయులకు 3 : 29 (ERVTE)
ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ.
రోమీయులకు 3 : 30 (ERVTE)
ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ.
రోమీయులకు 3 : 31 (ERVTE)
ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31