రోమీయులకు 5 : 1 (ERVTE)
{#1ನೀತಿನಿರ್ಣಯ } ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.
రోమీయులకు 5 : 2 (ERVTE)
ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.
రోమీయులకు 5 : 3 (ERVTE)
ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.
రోమీయులకు 5 : 4 (ERVTE)
ನಾವು ಬಲಶಾಲಿಗಳಾಗಿದ್ದೇವೆ ಎಂಬುದಕ್ಕೆ ಈ ತಾಳ್ಮೆಯೇ ಆಧಾರ. ನಮಗೆ ನಿರೀಕ್ಷೆಯನ್ನು ಕೊಡುವಂಥದ್ದು ಈ ಆಧಾರವೇ.
రోమీయులకు 5 : 5 (ERVTE)
ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.
రోమీయులకు 5 : 6 (ERVTE)
ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು.
రోమీయులకు 5 : 7 (ERVTE)
ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು.
రోమీయులకు 5 : 8 (ERVTE)
ಆದರೆ ನಾವು ಇನ್ನೂ ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟನು. ದೇವರಿಗೆ ನಮ್ಮ ಮೇಲಿರುವ ಮಹಾ ಪ್ರೀತಿಯನ್ನು ಇದು ವ್ಯಕ್ತಪಡಿಸಿದೆ.
రోమీయులకు 5 : 9 (ERVTE)
ನಾವು ಕ್ರಿಸ್ತನ ರಕ್ತದ ಮೂಲಕವಾಗಿ ನೀತಿವಂತರಾಗಿದ್ದೇವೆ. ಆದ್ದರಿಂದ ಆತನ ಮೂಲಕ ದೇವರ ಕೋಪದಿಂದ ಖಂಡಿತವಾಗಿ ತಪ್ಪಿಸಿಕೊಳ್ಳುತ್ತೇವೆ.
రోమీయులకు 5 : 10 (ERVTE)
ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.
రోమీయులకు 5 : 11 (ERVTE)
ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.
రోమీయులకు 5 : 12 (ERVTE)
{#1ಆದಾಮ ಮತ್ತು ಕ್ರಿಸ್ತನು } ಒಬ್ಬ ಮನುಷ್ಯನು (ಆದಾಮ) ಮಾಡಿದ ಕೃತ್ಯದಿಂದ ಪಾಪವು ಲೋಕಕ್ಕೆ ಬಂದಿತು. ಆ ಪಾಪದೊಂದಿಗೆ ಮರಣವೂ ಬಂದಿತು. ಆದಕಾರಣವೇ ಎಲ್ಲಾ ಜನರು ಸಾಯಲೇಬೇಕು; ಏಕೆಂದರೆ ಎಲ್ಲಾ ಜನರು ಪಾಪ ಮಾಡಿದ್ದಾರೆ.
రోమీయులకు 5 : 13 (ERVTE)
ಮೋಶೆಯ ಧರ್ಮಶಾಸ್ತ್ರಕ್ಕಿಂತ ಮೊದಲೇ ಪಾಪವು ಲೋಕದಲ್ಲಿತ್ತು. ಧರ್ಮಶಾಸ್ತ್ರವು ಇಲ್ಲದಿದ್ದರೆ, ದೇವರು ಜನರ ಪಾಪವನ್ನು ಪರಿಗಣಿಸುವುದಿಲ್ಲ.
రోమీయులకు 5 : 14 (ERVTE)
ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.
రోమీయులకు 5 : 15 (ERVTE)
ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ “ಜೀವ”ವನ್ನು ಅನೇಕ ಜನರು ಹೊಂದಿಕೊಂಡರು.
రోమీయులకు 5 : 16 (ERVTE)
ಆದಾಮನು ಒಮ್ಮೆ ಪಾಪಮಾಡಿದ ಮೇಲೆ ಅವನಿಗೆ ಅಪರಾಧಿ ಎಂದು ತೀರ್ಪು ನೀಡಲಾಯಿತು. ಆದರೆ ದೇವರ ಉಚಿತವಾದ ಕೊಡುಗೆ ಅದಕ್ಕೆ ತದ್ವಿರುದ್ಧವಾಗಿದೆ. ಅನೇಕ ಪಾಪಗಳ ದೆಸೆಯಿಂದ ದೇವರ ಉಚಿತವಾದ ಕೊಡುಗೆ ಬಂದಿತು. ಆ ಉಚಿತ ಕೊಡುಗೆ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ.
రోమీయులకు 5 : 17 (ERVTE)
ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.
రోమీయులకు 5 : 18 (ERVTE)
ಹೀಗಿರಲಾಗಿ, ಆದಾಮನ ಒಂದು ಪಾಪವು ಎಲ್ಲಾ ಜನರಿಗೆ ಮರಣದಂಡನೆಯನ್ನು ತಂದಿತು. ಆದರೆ ಅದೇ ರೀತಿಯಲ್ಲಿ, ಕ್ರಿಸ್ತನು ಮಾಡಿದ ಒಂದೇ ಒಳ್ಳೆಯ ಕಾರ್ಯವು, ಎಲ್ಲಾ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಮತ್ತು ಆ ಜನರಿಗೆ ಅದು ನಿಜವಾದ ಜೀವವನ್ನು ತರುತ್ತದೆ.
రోమీయులకు 5 : 19 (ERVTE)
ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.
రోమీయులకు 5 : 20 (ERVTE)
ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.
రోమీయులకు 5 : 21 (ERVTE)
ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.

1 2 3 4 5 6 7 8 9 10 11 12 13 14 15 16 17 18 19 20 21