పరమగీతము 1 : 2 (ERVTE)
{#1ಪ್ರಿಯತಮೆ ಪ್ರಿಯಕರನಿಗೆ } ನಿನ್ನ ಬಾಯಿಂದ ನನ್ನನ್ನು ಮುದ್ದಾಡು, ನಿನ್ನ ಪ್ರೀತಿ ದ್ರಾಕ್ಷಾರಸಕ್ಕಿಂತಲೂ ಉತ್ತಮ.
పరమగీతము 1 : 3 (ERVTE)
ನಿನ್ನ ತೈಲವು ಪರಿಮಳಭರಿತವಾಗಿದೆ; ನಿನ್ನ ಹೆಸರು ಸುಗಂಧದ್ರವ್ಯದಂತಿದೆ. ಆದ್ದರಿಂದ ಯುವತಿಯರು ನಿನ್ನನ್ನು ಪ್ರೀತಿಸುವರು.
పరమగీతము 1 : 4 (ERVTE)
ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ.
పరమగీతము 1 : 5 (ERVTE)
{#1ಜೆರುಸಲೇಮಿನ ಸ್ತ್ರೀಯರು } ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು. {#1ಪ್ರಿಯತಮೆ ಜೆರುಸಲೇಮಿನ ಸ್ತ್ರೀಯರಿಗೆ } ಜೆರುಸಲೇಮಿನ ಸ್ತ್ರೀಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ.
పరమగీతము 1 : 6 (ERVTE)
ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.
పరమగీతము 1 : 7 (ERVTE)
{#1ಪ್ರಿಯತಮೆ ಪ್ರಿಯಕರನಿಗೆ } ನನ್ನ ಪ್ರಾಣಪ್ರಿಯನೇ, ನಿನ್ನ ಕುರಿಗಳನ್ನು ಎಲ್ಲಿ ಮೇಯಿಸುವೆ? ಮಧ್ಯಾಹ್ನದಲ್ಲಿ ಅವುಗಳನ್ನು ಎಲ್ಲಿ ಮಲಗಿಸುವೆ? ಮುಸುಕುಹಾಕಿಕೊಂಡು ನಿನ್ನ ಸ್ನೇಹಿತರ ಮಂದೆಗಳ ಹತ್ತಿರ ಅಲೆದಾಡುವ ಹುಡುಗಿಯಂತೆ ನಾನೇಕಿರಬೇಕು?
పరమగీతము 1 : 8 (ERVTE)
{#1ಪ್ರಿಯಕರನು ಪ್ರಿಯತಮೆಗೆ } ಸ್ತ್ರೀಯರಲ್ಲಿ ಅತ್ಯಂತ ರೂಪವತಿಯೇ, ನಿನ್ನ ಪ್ರಿಯನು ಎಲ್ಲಿದ್ದಾನೆಂಬುದು ನಿನಗೆ ಗೊತ್ತಿಲ್ಲದಿದ್ದರೆ, ಹೋಗು, ಕುರಿಗಳನ್ನು ಹಿಂಬಾಲಿಸು. ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
పరమగీతము 1 : 9 (ERVTE)
ನನ್ನ ಪ್ರಿಯೆ, ಫರೋಹನ ರಥಗಳ ಮಧ್ಯದಲ್ಲಿರುವ ಹೆಣ್ಣು ಕುದುರೆಗಿಂತಲೂ ನೀನು ಸುಂದರಳಾಗಿರುವೆ.
పరమగీతము 1 : 10 (ERVTE)
ನಿನ್ನ ಕೆನ್ನೆಗಳು ಅಲಂಕಾರಗಳಿಂದ ಸುಂದರವಾಗಿವೆ. ನಿನ್ನ ಕಂಠವು ಹಾರಗಳಿಂದ ಅಂದವಾಗಿವೆ.
పరమగీతము 1 : 11 (ERVTE)
ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು.
పరమగీతము 1 : 12 (ERVTE)
{#1ಪ್ರಿಯತಮೆ } ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.
పరమగీతము 1 : 13 (ERVTE)
ನನ್ನ ಪ್ರಿಯನು ರಾತ್ರಿಯೆಲ್ಲಾ ನನ್ನ ಸ್ತನಗಳ ನಡುವೆ ಇರುವ ಗೋಲರಸದ ಚೀಲದಂತಿದ್ದಾನೆ.
పరమగీతము 1 : 14 (ERVTE)
ನನ್ನ ಪ್ರಿಯನು ನನಗೆ ಏನ್ಗೆದಿಯ ತೋಟಗಳ ಗೋರಂಟೆಯ ಹೂಗೊಂಚಲು.
పరమగీతము 1 : 15 (ERVTE)
{#1ಪ್ರಿಯಕರ } ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.
పరమగీతము 1 : 16 (ERVTE)
{#1ಪ್ರಿಯತಮೆ } ನನ್ನ ಪ್ರಿಯನೇ, ನೀನು ಬಹು ಸುಂದರ! ಹೌದು, ನೀನು ಎಷ್ಟೋ ಮನೋಹರ! ನಮ್ಮ ಹಾಸಿಗೆ ಎಷ್ಟೋ ಉಲ್ಲಾಸಕರ!
పరమగీతము 1 : 17 (ERVTE)
ನಮ್ಮ ಮನೆಯ ತೊಲೆಗಳು ದೇವದಾರು ಮರದ ತೊಲೆಗಳು. ನಮ್ಮ ಮನೆಯ ಜಂತೆಗಳು ತುರಾಯಿ ಮರದ ಜಂತೆಗಳು.
❮
❯
1
2
3
4
5
6
7
8
9
10
11
12
13
14
15
16
17