పరమగీతము 5 : 1 (ERVTE)
{#1ಪ್ರಿಯಕರ } ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ.
పరమగీతము 5 : 2 (ERVTE)
{#1ಪ್ರಿಯತಮೆಯು ಸ್ನೇಹಿತರಿಗೆ } ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ! {#1ಪ್ರಿಯತಮೆ } ನಾನು ನಿದ್ರೆಮಾಡುತ್ತಿರುವಾಗಲೂ ಹೃದಯ ಎಚ್ಚರವಾಗಿರುವುದು. ನನ್ನ ಪ್ರಿಯನು ಬಾಗಿಲು ತಟ್ಟುತ್ತಿರುವುದು ನನಗೆ ಕೇಳುತ್ತಿದೆ. “ನನ್ನ ಪ್ರಿಯಳೇ, ನನ್ನ ಕಾಂತಳೇ, ನನ್ನ ಪಾರಿವಾಳವೇ, ನನ್ನ ನಿರ್ಮಲೆಯೇ, ಬಾಗಿಲು ತೆರೆ! ನನ್ನ ತಲೆಯು ಇಬ್ಬನಿಯಿಂದ ತೇವವಾಗಿದೆ; ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತೇವವಾಗಿದೆ.”
పరమగీతము 5 : 3 (ERVTE)
“ನಾನು ನನ್ನ ಮೇಲಂಗಿಯನ್ನು ತೆಗೆದಿದ್ದೇನೆ; ಅದನ್ನು ಮತ್ತೆ ಹಾಕಿಕೊಳ್ಳಲು ನನಗೆ ಇಷ್ಟವಿಲ್ಲ. ನಾನು ನನ್ನ ಪಾದಗಳನ್ನು ತೊಳೆದಿದ್ದೇನೆ. ಅವುಗಳನ್ನು ಮತ್ತೆ ಕೊಳೆಮಾಡಲು ನನಗೆ ಇಷ್ಟವಿಲ್ಲ.”
పరమగీతము 5 : 4 (ERVTE)
ನನ್ನ ಪ್ರಿಯನು ಬಾಗಿಲ ಚಿಲಕದ ರಂಧ್ರದಲ್ಲಿ ಕೈ ನೀಡಿದಾಗ ಅವನ ಮೇಲೆ ನನಗೆ ಮರುಕವಾಯಿತು.
పరమగీతము 5 : 5 (ERVTE)
ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು.
పరమగీతము 5 : 6 (ERVTE)
ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.
పరమగీతము 5 : 7 (ERVTE)
ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.
పరమగీతము 5 : 8 (ERVTE)
ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.
పరమగీతము 5 : 9 (ERVTE)
{#1ಜೆರುಸಲೇಮಿನ ಸ್ತ್ರೀಯರು ಪ್ರಿಯತಮೆಗೆ } ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?
పరమగీతము 5 : 10 (ERVTE)
{#1ಪ್ರಿಯತಮೆಯು ಜೆರುಸಲೇಮಿನ ಸ್ತ್ರೀಯರಿಗೆ } ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.
పరమగీతము 5 : 11 (ERVTE)
ಅವನ ತಲೆಯು ಚೊಕ್ಕ ಬಂಗಾರದಂತಿದೆ; ಅವನ ಗುಂಗುರು ಕೂದಲು ಕಾಗೆಯಷ್ಟೇ ಕಪ್ಪಾಗಿದೆ.
పరమగీతము 5 : 12 (ERVTE)
ಅವನ ಕಣ್ಣುಗಳು ಹಾಲಿನಲ್ಲಿ ಸ್ನಾನಮಾಡಿದ ಪಾರಿವಾಳಗಳಂತೆಯೂ ಆಭರಣದಲ್ಲಿ ಜೋಡಿಸಿರುವ ಮುತ್ತಿನಂತೆಯೂ ಇವೆ.
పరమగీతము 5 : 13 (ERVTE)
ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.
పరమగీతము 5 : 14 (ERVTE)
ಅವನ ಕೈಗಳು ಪೀತರತ್ನದಿಂದ ಕೂಡಿದ ಬಂಗಾರದ ಸಲಾಕೆಯಂತಿವೆ; ಅವನ ದೇಹವು ನೀಲಿಬಣ್ಣದ ಕಲ್ಲುಗಳಿಂದ ಕೂಡಿದ ನಯವಾದ ದಂತದಂತಿದೆ.
పరమగీతము 5 : 15 (ERVTE)
ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.
పరమగీతము 5 : 16 (ERVTE)
ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.
❮
❯
1
2
3
4
5
6
7
8
9
10
11
12
13
14
15
16