తీతుకు 1 : 1 (ERVTE)
ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ.
తీతుకు 1 : 2 (ERVTE)
ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.
తీతుకు 1 : 3 (ERVTE)
ತಕ್ಕಕಾಲ ಬಂದಾಗ ದೇವರು ಆ ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಈ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ.
తీతుకు 1 : 4 (ERVTE)
తీతుకు 1 : 5 (ERVTE)
ನಾನು ಈ ಪತ್ರವನ್ನು ತೀತನಿಗೆ ಬರೆಯುತ್ತಿದ್ದೇನೆ. ನಮ್ಮೆಲ್ಲರ ನಂಬಿಕೆಯ ಸಂಬಂಧದಲ್ಲಿ ನೀನು ನನಗೆ ನಿಜವಾದ ಮಗನಂತಿರುವೆ. ನಮ್ಮ ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಲಭಿಸಲಿ. {#1ಕ್ರೇತದಲ್ಲಿ ತೀತನ ಕಾರ್ಯ } ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.
తీతుకు 1 : 6 (ERVTE)
ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.
తీతుకు 1 : 7 (ERVTE)
ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.
తీతుకు 1 : 8 (ERVTE)
ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.
తీతుకు 1 : 9 (ERVTE)
ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.
తీతుకు 1 : 10 (ERVTE)
ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.
తీతుకు 1 : 11 (ERVTE)
ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.
తీతుకు 1 : 12 (ERVTE)
ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.
తీతుకు 1 : 13 (ERVTE)
ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು,
తీతుకు 1 : 14 (ERVTE)
ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ.
తీతుకు 1 : 15 (ERVTE)
ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.
తీతుకు 1 : 16 (ERVTE)
ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.

1 2 3 4 5 6 7 8 9 10 11 12 13 14 15 16