జెకర్యా 2 : 1 (ERVTE)
{#1ಜೆರುಸಲೇಮನ್ನು ಅಳತೆ ಮಾಡಿದ್ದು } ಆಗ ನಾನು ಮೇಲಕ್ಕೆ ನೋಡಿದಾಗ ಒಬ್ಬ ಮನುಷ್ಯನು ಕೈಯಲ್ಲಿ ಒಂದು ಹಗ್ಗ ಮತ್ತು ಅಳತೆ ಮಾಡುವ ಸಾಮಾಗ್ರಿಗಳನ್ನು ಹಿಡಿದುಕೊಂಡಿದ್ದನ್ನು ಕಂಡೆನು.
జెకర్యా 2 : 2 (ERVTE)
“ನೀನು ಎಲ್ಲಿಗೆ ಹೋಗುತ್ತೀ?” ಎಂದು ನಾನು ಅವನನ್ನು ವಿಚಾರಿಸಿದೆನು.
జెకర్యా 2 : 3 (ERVTE)
“ನಾನು ಜೆರುಸಲೇಮ್ ಎಷ್ಟು ಉದ್ದಗಲವಿದೆಯೆಂದು ಅಳತೆ ಮಾಡಲು ಹೋಗುತ್ತಿದ್ದೇನೆ” ಎಂದನು. ಆಗ ನನ್ನೊಡನೆ ಮಾತನಾಡುತ್ತಿದ್ದ ದೂತನು ನನ್ನನ್ನು ಬಿಟ್ಟುಹೋದನು. ಅವನೊಡನೆ ಮಾತನಾಡಲು ಇನ್ನೊಬ್ಬ ದೂತನು ಬಂದನು.
జెకర్యా 2 : 4 (ERVTE)
ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’
జెకర్యా 2 : 5 (ERVTE)
ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’ ”
జెకర్యా 2 : 6 (ERVTE)
{#1ತಮ್ಮ ಮನೆಗೆ ಬರಲು ದೇವರು ತನ್ನ ಜನರನ್ನು ಕರೆಯುತ್ತಾನೆ } ಯೆಹೋವನು ಹೀಗೆನ್ನುತ್ತಾನೆ, “ಅವಸರಪಡುತ್ತಾ ಉತ್ತರದ ದೇಶಗಳಿಂದ ಹೊರಬನ್ನಿರಿ. ಹೌದು, ನಾನು ನಿಮ್ಮ ಜನರನ್ನು ಪ್ರತಿಯೊಂದು ದಿಕ್ಕಿಗೂ ಚದರಿಸಿರುವುದು ನಿಜ.
జెకర్యా 2 : 7 (ERVTE)
ಚೀಯೋನಿನ ಜನರಾದ ನೀವು ಬಾಬಿಲೋನಿನಲ್ಲಿ ವಾಸಿಸುತ್ತಿದ್ದೀರಿ. ಅಲ್ಲಿಂದ ತಪ್ಪಿಸಿಕೊಂಡು ಬನ್ನಿರಿ. ಆ ನಗರದಿಂದ ಓಡಿಹೋಗಿರಿ.”
జెకర్యా 2 : 8 (ERVTE)
ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.
జెకర్యా 2 : 9 (ERVTE)
ಬಾಬಿಲೋನಿನ ಜನರು ನನ್ನ ಜನರನ್ನು ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ನಾನು ಅವರನ್ನು ಹೊಡೆಯುವೆನು. ಅವರನ್ನು ನನ್ನ ಜನರ ಗುಲಾಮರನ್ನಾಗಿ ಮಾಡುವೆನು.” ಆಗ ಯೆಹೋವ ದೇವರು ನನ್ನನ್ನು ಕಳುಹಿಸಿದನೆಂಬುದು ನಿಮಗೆ ಗೊತ್ತಾಗುವದು.
జెకర్యా 2 : 10 (ERVTE)
ಯೆಹೋವನು ಹೀಗೆನ್ನುತ್ತಾನೆ, “ಚೀಯೋನೇ, ಆನಂದಿಸು, ಯಾಕೆಂದರೆ ನಾನು ಬಂದು ನಿಮ್ಮ ಪಟ್ಟಣದಲ್ಲಿ ವಾಸಿಸುವೆನು.
జెకర్యా 2 : 11 (ERVTE)
ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.
జెకర్యా 2 : 12 (ERVTE)
ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು. ಯೆಹೂದವು ಆ ಪವಿತ್ರ ದೇಶದಲ್ಲಿರುವ ಆತನ ಪಾಲು.
జెకర్యా 2 : 13 (ERVTE)
ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.

1 2 3 4 5 6 7 8 9 10 11 12 13