జెఫన్యా 3 : 1 (ERVTE)
{#1ಜೆರುಸಲೇಮಿನ ಭವಿಷ್ಯ } ಜೆರುಸಲೇಮೇ, ನಿನ್ನ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಇತರರನ್ನು ಹಿಂಸಿಸಿದರು ಮತ್ತು ಪಾಪದಿಂದ ಮಲಿನರಾದರು.
జెఫన్యా 3 : 2 (ERVTE)
ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ.
జెఫన్యా 3 : 3 (ERVTE)
ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.
జెఫన్యా 3 : 4 (ERVTE)
ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.
జెఫన్యా 3 : 5 (ERVTE)
ಆದರೆ ದೇವರು ಇನ್ನೂ ಆ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ಆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.
జెఫన్యా 3 : 6 (ERVTE)
ದೇವರು ಹೀಗೆನ್ನುತ್ತಾನೆ, “ನಾನು ಇಡೀ ಜನಾಂಗಗಳನ್ನು ನಾಶಮಾಡಿದ್ದೇನೆ. ಅವರ ಬುರುಜುಗಳನ್ನು ನಾಶಮಾಡಿ, ಅವರ ರಸ್ತೆಗಳಲ್ಲಿ ಯಾರೂ ನಡೆಯದ ಹಾಗೆ ಮಾಡಿರುತ್ತೇನೆ. ಅವರ ನಗರಗಳು ನಿರ್ಜನವಾಗಿವೆ. ಯಾರೂ ಅಲ್ಲಿ ವಾಸಮಾಡುವದಿಲ್ಲ.
జెఫన్యా 3 : 7 (ERVTE)
ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.
జెఫన్యా 3 : 8 (ERVTE)
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
జెఫన్యా 3 : 9 (ERVTE)
ಆಗ ನಾನು ಇತರ ಜನಾಂಗಗಳವರ ಭಾಷೆಯನ್ನು ಬದಲಾಯಿಸಿ ದೇವರಾದ ಯೆಹೋವನ ನಾಮವನ್ನು ಉಚ್ಚರಿಸುವಂತೆ ಮಾಡುವೆನು. ಅವರೆಲ್ಲರೂ ನನ್ನನ್ನು ಆರಾಧಿಸುವರು. ಒಟ್ಟಾಗಿ ಸೇರಿ ಒಂದೇ ಜನಾಂಗವಾಗಿ ನನ್ನನ್ನು ಆರಾಧಿಸುವರು.
జెఫన్యా 3 : 10 (ERVTE)
ಇಥಿಯೋಪ್ಯದಲ್ಲಿ ನದಿಯ ಆಚೆ ದಡದವರೆಗೂ ಜನರು ಬರುವರು. ನನ್ನಿಂದ ಚದರಿಹೋಗಿದ್ದ ಜನರು ನನ್ನ ಬಳಿಗೆ ಬರುವರು. ನನ್ನನ್ನು ಆರಾಧಿಸಲು ಬರುವವರು ನನಗೆ ಕಾಣಿಕೆಗಳನ್ನು ತರುವರು.
జెఫన్యా 3 : 11 (ERVTE)
“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.
జెఫన్యా 3 : 12 (ERVTE)
ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.
జెఫన్యా 3 : 13 (ERVTE)
ಇಸ್ರೇಲಿನಲ್ಲಿ ಉಳಿದವರು ದುಷ್ಕೃತ್ಯಗಳನ್ನು ಮಾಡುವುದಿಲ್ಲ. ಸುಳ್ಳು ಹೇಳುವದಿಲ್ಲ. ಜನರನ್ನು ಮೋಸಗೊಳಿಸುವದಿಲ್ಲ. ಅವರು ಕುರಿಗಳಂತೆ ಮೇದು ವಿಶ್ರಾಂತಿ ತೆಗೆದುಕೊಳ್ಳುವರು. ಯಾರೂ ಅವರ ಗೊಡವೆಗೆ ಹೋಗುವುದಿಲ್ಲ.”
జెఫన్యా 3 : 14 (ERVTE)
{#1ಸಂತಸದ ಹಾಡು } ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.
జెఫన్యా 3 : 15 (ERVTE)
ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.
జెఫన్యా 3 : 16 (ERVTE)
ಆ ಸಮಯದಲ್ಲಿ ಜೆರುಸಲೇಮಿಗೆ ಹೀಗೆ ಹೇಳಲಾಗುವುದು: “ಬಲವಾಗಿರು! ಭಯಪಡದಿರು!
జెఫన్యా 3 : 17 (ERVTE)
ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿದ್ದಾನೆ. ಆತನು ರಣಶೂರನು. ನಿನ್ನನ್ನು ರಕ್ಷಿಸಿ ನಿನ್ನ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸುವನು. ನಿನ್ನೊಂದಿಗೆ ಎಷ್ಟು ಸಂತೋಷದಲ್ಲಿರುವನೆಂದು ತೋರಿಸುವನು. ನಿನ್ನೊಂದಿಗೆ ನಗಾಡುತ್ತಾ ಹರ್ಷಿಸುವನು.
జెఫన్యా 3 : 18 (ERVTE)
ನಿನ್ನ ನಾಚಿಕೆಯನ್ನು ತೆಗೆದುಬಿಡುವನು. ನಿನ್ನನ್ನು ಹಿಂಸಿಸುವ ಜನರನ್ನು ನಿಲ್ಲಿಸುವನು.
జెఫన్యా 3 : 19 (ERVTE)
ಆ ಸಮಯದಲ್ಲಿ, ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ಗಾಯಗೊಂಡಿರುವ ನಿನ್ನ ಜನರನ್ನು ರಕ್ಷಿಸುವೆನು. ತಮ್ಮ ದೇಶದಿಂದ ದೂರಕ್ಕೆ ಚದರಿಸಲ್ಪಟ್ಟ ಜನರನ್ನು ನಾನು ಹಿಂದಕ್ಕೆ ಕರೆದುಕೊಂಡು ಬರುವೆನು. ನಾನು ಅವರನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ಅವರನ್ನು ಹೊಗಳುವರು.
జెఫన్యా 3 : 20 (ERVTE)
ಆಗ ನಿಮ್ಮೆಲ್ಲರನ್ನು ನಾನು ಹಿಂದಕ್ಕೆ ಕರೆತರುವೆನು. ನಿನ್ನನ್ನು ಪ್ರಸಿದ್ಧಿಪಡಿಸುವೆನು. ಎಲ್ಲಾ ಜನರು ನಿನ್ನನ್ನು ಹೊಗಳುವರು. ನಿನ್ನ ಕಣ್ಣೆದುರಿಗೆ ಸೆರೆಹಿಡಿದವರನ್ನು ಕರೆತರುವಾಗ ಹಾಗೆ ಆಗುವದು” ಇದು ಯೆಹೋವನ ನುಡಿ.
❮
❯
1
2
3
4
5
6
7
8
9
10
11
12
13
14
15
16
17
18
19
20